ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಇತ್ತೀಚಿನ ದಿನಗಳಲ್ಲಿ ಫ್ಯಾನ್ಸ್ ವಾರ್ ಜೋರಾಗಿದೆ. ಕಿಚ್ಚ ಸುದೀಪ್ ಅಭಿಮಾನಿಗಳು ಮತ್ತು ದರ್ಶನ್ ಅಭಿಮಾನಿಗಳು ಪರಸ್ಪರ ಕಿತ್ತಾಡಿಕೊಳ್ಳುತ್ತಿದ್ದಾರೆ. ಕೆಟ್ಟ ಕಮೆಂಟ್ಗಳನ್ನು ಮಾಡಲಾಗುತ್ತಿದೆ. ಇದರಿಂದ ಸಿನಿಮಾದ ಮೇಲೆ ಪರಿಣಾಮ ಬೀರುತ್ತಿದೆ. ಈ ಕುರಿತು ಶಿವರಾಜ್ಕುಮಾರ್ ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ..
ಸೋಶಿಯಲ್ ಮೀಡಿಯಾ ತುಂಬೆಲ್ಲ ದರ್ಶನ್ (Darshan) ಫ್ಯಾನ್ಸ್ ವರ್ಸಸ್ ಸುದೀಪ್ ಫ್ಯಾನ್ಸ್ ಎಂಬಂತಹ ವಾತಾವರಣ ನಿರ್ಮಾಣ ಆಗಿದೆ. ‘ದಿ ಡೆವಿಲ್’ ಮತ್ತು ‘ಮಾರ್ಕ್’ ಸಿನಿಮಾಗಳು ಕೆಲವೇ ದಿನಗಳ ಅಂತರದಲ್ಲಿ ಬಿಡುಗಡೆ ಆಗಿದ್ದು, ಫ್ಯಾನ್ಸ್ ವಾರ್ (Fans War) ಶುರುವಾಗಿದೆ. ಇದೇ ಸಮಯದಲ್ಲಿ ಶಿವರಾಜ್ಕುಮಾರ್ ಅಭಿನಯದ ‘45’ ಸಿನಿಮಾ ಕೂಡ ತೆರೆಕಂಡಿದೆ. ಫಸ್ಟ್ ಡೇ ಫಸ್ಟ್ ಶೋ ಸಿನಿಮಾ ನೋಡಿದ ಬಳಿಕ ಮಾಧ್ಯಮಗಳ ಜೊತೆ ಶಿವಣ್ಣ ಮಾತನಾಡಿದ್ದಾರೆ. ಫ್ಯಾನ್ಸ್ ವಾರ್ ಕುರಿತು ಅವರು ಖಡಕ್ ರಿಯಾಕ್ಷನ್ ನೀಡಿದ್ದಾರೆ. ‘ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಯಾರ ಮನೆಯನ್ನೂ ಒಡೆಯೋಕೆ ಹೋಗಬಾರದು. ಯಾರ ಭಾವನೆಗಳ ಜೊತೆಗೂ ಆಟ ಆಡಬಾರದು. ಸಮಸ್ಯೆ ಪರಿಹರಿಸಲು ಪ್ರಯತ್ನಿಸಬೇಕು. ಬದುಕೋಣ, ಬದುಕೋಕೆ ಬಿಡೋಣ ಎಂಬ ಭಾವನೆ ಎಲ್ಲರಿಗೂ ಇರಬೇಕು. ಸಮಾಜ ಇಷ್ಟೇ. ನಾವು ಎಷ್ಟು ದಿನ ಇರುತ್ತೇವೆ? ಅಷ್ಟು ದಿನ ನಾವೆಲ್ಲರೂ ಅನ್ಯೋನ್ಯವಾಗಿ ಹೊಂದಿಕೊಂಡು ಇರಬೇಕು’ ಎಂದು ಶಿವರಾಜ್ಕುಮಾರ್ (Shivarajkumar) ಅವರು ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

