‘ಅಭಿಮಾನಿಗಳಿಗೆ ಖಂಡಿತಾ ಅಪ್ಪು ಸಮಾಧಿ ದರ್ಶನಕ್ಕೆ ಅವಕಾಶ ಕೊಡ್ತೀವಿ, ಆದರೆ 2 ದಿನ ಕಾಯಿರಿ’: ಶಿವಣ್ಣ
ಪುನೀತ್ ರಾಜ್ಕುಮಾರ್ ಸಮಾಧಿ ದರ್ಶನ ಮಾಡಲು ಅಭಿಮಾನಿಗಳಿಗೆ ಇನ್ನೂ ಅವಕಾಶ ಸಿಕ್ಕಿಲ್ಲ. ದೂರದೂರದ ಊರುಗಳಿಂದ ಅಪಾರ ಸಂಖ್ಯೆಯ ಜನರು ಬಂದು ಕಾಯುತ್ತಿದ್ದಾರೆ.
ಹೃದಯಾಘಾತದಿಂದ ಶುಕ್ರವಾರ (ಅ.29) ನಿಧನರಾದ ಪುನೀತ್ ರಾಜ್ಕುಮಾರ್ ಅವರ ಸಮಾಧಿಗೆ ಕುಟುಂಬದವರು ಇಂದು (ನ.2) ಹಾಲು-ತುಪ್ಪ ಅರ್ಪಿಸುವ ಕಾರ್ಯ ಮಾಡುತ್ತಿದ್ದಾರೆ. ಬೆಳಗ್ಗೆ 11 ಗಂಟೆಗೆ ಈ ಕಾರ್ಯ ನಡೆಯಲಿದೆ. ಆದರೆ ಅಪ್ಪು ಸಮಾಧಿ ದರ್ಶನ ಮಾಡಲು ಅಭಿಮಾನಿಗಳಿಗೆ ಇನ್ನೂ ಅವಕಾಶ ಸಿಕ್ಕಿಲ್ಲ. ದೂರದೂರದ ಊರುಗಳಿಂದ ಅಪಾರ ಸಂಖ್ಯೆಯ ಜನರು ಬಂದು ಸಮಾಧಿ ದರ್ಶನಕ್ಕಾಗಿ ಕಾಯುತ್ತಿದ್ದಾರೆ. ‘ಇನ್ನು ಎರಡು ದಿನ ಕಾಯಿರಿ’ ಎಂದು ಅವರಿಗೆಲ್ಲ ಶಿವರಾಜ್ಕುಮಾರ್ ಮನವಿ ಮಾಡಿಕೊಂಡಿದ್ದಾರೆ.
‘ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಬರುತ್ತಲೇ ಇದ್ದಾರೆ. ಆದರೆ ಸಮಾಧಿ ನೋಡಲು ಯಾರಿಗೂ ಈಗ ಅವಕಾಶ ಇಲ್ಲ. ಶೀಘ್ರವೇ ಅವಕಾಶ ಮಾಡಿಕೊಡುತ್ತೇವೆ. ಮಕ್ಕಳು ಮತ್ತು ಮನೆಯವರಿಂದ ಮಂಗಳವಾರ ಹಾಲು-ತುಪ್ಪ ಕಾರ್ಯ ಮಾಡಿಸಬೇಕು. ಅದೊಂದು ಕಾರ್ಯ ಮುಗಿಸಿದ ಬಳಿಕವೇ ಬೇರೆಯವರಿಗೆ ಅನುಮತಿ ನೀಡೋಣ ಅಂತ ತೀರ್ಮಾನಿಸಿದ್ದೇವೆ’ ಎಂದು ರಾಘಣ್ಣ ಹೇಳಿದ್ದರು.
ಇದನ್ನೂ ಓದಿ:
ಪುನೀತ್ ಅಂತ್ಯಕ್ರಿಯೆ ಮರುದಿನ ಹೇಗಿದೆ ಶಿವಣ್ಣನ ದಿನಚರಿ? ನೋವು ನುಂಗಿಕೊಂಡು ಮುಂದಿನ ಹೆಜ್ಜೆ ಇಟ್ಟ ಶಿವರಾಜ್ಕುಮಾರ್
ನನ್ನ ಬದುಕಿನಲ್ಲಿ ಇವತ್ತು ಮರೆಯಲಾಗದ ದಿನ: ಜನತೆಗೆ ಡಿಕೆಶಿ ಧನ್ಯವಾದ
ಅಗ್ನಿ ಅವಘಡ: 8ನೇ ಮಹಡಿಯಲ್ಲಿ ಹೊತ್ತಿಕೊಂಡ ದಸರಾ ಪೂಜೆ ವೇಳೆ ಹಚ್ಚಿದ್ದ ದೀಪ
ದಸರಾ ಸಂಭ್ರಮದಲ್ಲಿ ಭಾಗಿಯಾದ ರುಕ್ಮಿಣಿ ವಸಂತ್, ತಪಸ್ವಿನಿ ಪೂಣಚ್ಚ, ಸಪ್ತಮಿ
ನಂದಿ ಧ್ವಜಕ್ಕೆ ಡಿಕೆಶಿ ಪೂಜೆ ಸಲ್ಲಿಕೆ:ಮೈಸೂರಿನಲ್ಲಿ ಮರುಕಳಿಸಿದ ಗತ ವೈಭವ

