‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ

Updated on: Feb 20, 2026 | 10:58 PM

ನಿರಂಜನ್ ಸುಧೀಂದ್ರ ಮತ್ತು ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಅಭಿನಯಿಸಿರುವ ‘ಸೀತಾ ಪಯಣ’ ಸಿನಿಮಾ ರಿಲೀಸ್ ಆಗಿದೆ. ಈ ಸಿನಿಮಾವನ್ನು ನೋಡಿ ಶಿವರಾಜ್​ಕುಮಾರ್ ಅವರು ವಿಮರ್ಶೆ ತಿಳಿಸಿದ್ದಾರೆ. ಸಿನಿಮಾದಲ್ಲಿ ತಮಗೆ ಏನು ಇಷ್ಟ ಆಯಿತು ಎಂಬುದನ್ನು ಅವರು ಎಳೆಎಳೆಯಾಗಿ ವಿವರಿಸಿದ್ದಾರೆ. ವಿಡಿಯೋ ನೋಡಿ..

ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯಾ ಹಾಗೂ ನಿರಂಜನ್ ಸುಧೀಂದ್ರ ನಟಿಸಿರುವ ‘ಸೀತಾ ಪಯಣ’ (Seetha Payana) ಸಿನಿಮಾ ರಿಲೀಸ್ ಆಗಿದೆ. ಈ ಸಿನಿಮಾವನ್ನು ನೋಡಿ ಶಿವರಾಜ್​ಕುಮಾರ್ ಅವರು ವಿಮರ್ಶೆ ತಿಳಿಸಿದ್ದಾರೆ. ಸಿನಿಮಾದಲ್ಲಿ ತಮಗೆ ಏನು ಇಷ್ಟ ಆಯಿತು ಎಂಬುದನ್ನು ಅವರು ಎಳೆಎಳೆಯಾಗಿ ವಿವರಿಸಿದ್ದಾರೆ. ಅಲ್ಲದೇ ಅರ್ಜುನ್ ಸರ್ಜಾ ಕುಟುಂಬದ ಜೊತೆ ತಮಗೆ ಇರುವ ನಂಟು ಎಂಥದ್ದು ಎಂಬುದನ್ನು ಕೂಡ ಅವರು ತಿಳಿಸಿದ್ದಾರೆ. ‘ಸೀತಾ ಪಯಣ’ ಸಿನಿಮಾದ ಕಥೆ ಶಿವರಾಜ್​ಕುಮಾರ್ (Shiva Rajkumar) ಅವರಿಗೆ ತುಂಬಾ ಇಷ್ಟ ಆಗಿದೆ. ತಂದೆ-ಮಗಳ ಬಾಂಧವ್ಯದ ಕಥೆ ಅವರಿಗೆ ಕನೆಕ್ಟ್ ಆಗಿದೆ. ಆ ಕುರಿತು ಅವರು ಮಾತನಾಡಿದ್ದಾರೆ. ‘ಐಶ್ವರ್ಯಾ ಮತ್ತು ನಿರಂಜನ್ ನಟನೆ ತುಂಬಾ ಚೆನ್ನಾಗಿದೆ. ನನಗೂ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. ಹಾಗಾಗಿ ನನಗೆ ಈ ಸಿನಿಮಾ ಕನೆಕ್ಟ್ ಆಯಿತು’ ಎಂದು ಶಿವಣ್ಣ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More