‘ಭೈರತಿ ರಣಗಲ್’ ಸಿನಿಮಾ ಪ್ರೀ-ರಿಲೀಸ್ ಇವೆಂಟ್ ಲೈವ್ ವಿಡಿಯೋ ನೋಡಿ..

Updated on: Nov 10, 2024 | 7:50 PM

‘ಹ್ಯಾಟ್ರಿಕ್ ಹೀರೋ’ ಶಿವರಾಜ್​ಕುಮಾರ್​ ಅವರು ನಟಿಸಿರುವ ‘ಭೈರತಿ ರಣಗಲ್’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಬೆಂಗಳೂರಿನಲ್ಲಿ ಅದ್ದೂರಿಯಾಗಿ ಪ್ರೀ-ರಿಲೀಸ್ ಇವೆಂಟ್ ಮಾಡಲಾಗುತ್ತಿದೆ. ಈ ಕಾರ್ಯಕ್ರಮದ ಲೈವ್ ವಿಡಿಯೋ ಇಲ್ಲಿದೆ. ಶಿವರಾಜ್​ಕುಮಾರ್​, ರುಕ್ಮಿಣಿ ವಸಂತ್ ಸೇರಿದಂತೆ ಚಿತ್ರತಂಡದ ಅನೇಕರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದಾರೆ.

ನವೆಂಬರ್​ 15ರಂದು ‘ಭೈರತಿ ರಣಗಲ್’ ಸಿನಿಮಾ ರಿಲೀಸ್ ಆಗಲಿದೆ. ಶಿವರಾಜ್​ಕುಮಾರ್​, ರುಕ್ಮಿಣಿ ವಸಂತ್, ಛಾಯಾ ಸಿಂಗ್, ಅವಿನಾಶ್, ದೇವರಾಜ್, ಮಧು ಗುರುಸ್ವಾಮಿ ಮುಂತಾದವರು ನಟಿಸಿರುವ ಈ ಸಿನಿಮಾಗೆ ನರ್ತನ್ ಅವರು ಆ್ಯಕ್ಷನ್​-ಕಟ್ ಹೇಳಿದ್ದಾರೆ. ಇಂದು (ನ.10) ಬೆಂಗಳೂರಿನಲ್ಲಿ ಸಖತ್ ಗ್ರ್ಯಾಂಡ್​ ಆಗಿ ‘ಭೈರತಿ ರಣಗಲ್’ ಸಿನಿಮಾದ ಪ್ರೀ-ರಿಲೀಸ್ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ. ಅದ್ದೂರಿ ಇವೆಂಟ್​ನ ವಿಡಿಯೋ ಇಲ್ಲಿದೆ ನೋಡಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More