AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೀತಾ ಶಿವರಾಜ್​ಕುಮಾರ್ ಪರ ಪ್ರಚಾರಕ್ಕೆ ಬರಲಿದ್ದಾರೆ ಕನ್ನಡದ ಸೆಲೆಬ್ರಿಟಿಗಳು

ಗೀತಾ ಶಿವರಾಜ್​ಕುಮಾರ್ ಪರ ಪ್ರಚಾರಕ್ಕೆ ಬರಲಿದ್ದಾರೆ ಕನ್ನಡದ ಸೆಲೆಬ್ರಿಟಿಗಳು

ರಾಜೇಶ್ ದುಗ್ಗುಮನೆ
|

Updated on: Apr 29, 2024 | 10:21 AM

Share

ಶಿವರಾಜ್​ಕುಮಾರ್ ಅವರು ಗೀತಾ ಪರ ಪ್ರಚಾರ ಮಾಡುತ್ತಿದ್ದಾರೆ. ಮೇ 7ರಂದು ಶಿವಮೊಗ್ಗ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ. ವಿಶೇಷ ಎಂದರೆ ಸ್ಯಾಂಡಲ್​ವುಡ್​ನ ಅನೇಕ ಸೆಲೆಬ್ರಿಟಿಗಳು ಗೀತಾ ಪರ ಪ್ರಚಾರ ಮಾಡಲಿದ್ದಾರಂತೆ. ಈ ಬಗ್ಗೆ ಶಿವಣ್ಣ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಧ್ರುವ ಸರ್ಜಾ, ದುನಿಯಾ ವಿಜಯ್ ಮೊದಲಾದವರು ಬರಲಿದ್ದಾರೆ.

ಗೀತಾ ಶಿವರಾಜ್​ಕುಮಾರ್ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದಾರೆ. ಈ ಕ್ಷೇತ್ರ ಸಾಕಷ್ಟು ಕುತೂಹಲ ಮೂಡಿಸಿದೆ. ಶಿವರಾಜ್​ಕುಮಾರ್ (Shivarajkumar) ಅವರು ಗೀತಾ ಪರ ಪ್ರಚಾರ ಮಾಡುತ್ತಿದ್ದಾರೆ. ಮೇ 7ರಂದು ಶಿವಮೊಗ್ಗ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ. ವಿಶೇಷ ಎಂದರೆ ಸ್ಯಾಂಡಲ್​ವುಡ್​ನ ಅನೇಕ ಸೆಲೆಬ್ರಿಟಿಗಳು ಗೀತಾ ಪರ ಪ್ರಚಾರ ಮಾಡಲಿದ್ದಾರಂತೆ. ಈ ಬಗ್ಗೆ ಶಿವಣ್ಣ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ‘ಧ್ರುವ ಸರ್ಜಾ, ದುನಿಯಾ ವಿಜಯ್, ನೆನಪಿರಲಿ ಪ್ರೇಮ್ ಸೇರಿ ಅನೇಕ ಸೆಲೆಬ್ರಿಟಿಗಳು ಪ್ರಚಾರಕ್ಕೆ ಬರುತ್ತಾರೆ’ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ಗೀತಾ ಅವರ ವಿರುದ್ಧ ಬಿಜೆಪಿಯಿಂದ ಬಿವೈ ರಾಘವೇಂದ್ರ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಈಶ್ವರಪ್ಪ ಸ್ಪರ್ಧೆ ಮಾಡಿದ್ದಾರೆ. ಈ ಕಾರಣದಿಂದಲೂ ಶಿವಮೊಗ್ಗ ಕಣ ಕುತೂಹಲ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More