ಗೀತಾ ಶಿವರಾಜ್ಕುಮಾರ್ ಪರ ಪ್ರಚಾರಕ್ಕೆ ಬರಲಿದ್ದಾರೆ ಕನ್ನಡದ ಸೆಲೆಬ್ರಿಟಿಗಳು
ಶಿವರಾಜ್ಕುಮಾರ್ ಅವರು ಗೀತಾ ಪರ ಪ್ರಚಾರ ಮಾಡುತ್ತಿದ್ದಾರೆ. ಮೇ 7ರಂದು ಶಿವಮೊಗ್ಗ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ. ವಿಶೇಷ ಎಂದರೆ ಸ್ಯಾಂಡಲ್ವುಡ್ನ ಅನೇಕ ಸೆಲೆಬ್ರಿಟಿಗಳು ಗೀತಾ ಪರ ಪ್ರಚಾರ ಮಾಡಲಿದ್ದಾರಂತೆ. ಈ ಬಗ್ಗೆ ಶಿವಣ್ಣ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಧ್ರುವ ಸರ್ಜಾ, ದುನಿಯಾ ವಿಜಯ್ ಮೊದಲಾದವರು ಬರಲಿದ್ದಾರೆ.
ಗೀತಾ ಶಿವರಾಜ್ಕುಮಾರ್ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದಾರೆ. ಈ ಕ್ಷೇತ್ರ ಸಾಕಷ್ಟು ಕುತೂಹಲ ಮೂಡಿಸಿದೆ. ಶಿವರಾಜ್ಕುಮಾರ್ (Shivarajkumar) ಅವರು ಗೀತಾ ಪರ ಪ್ರಚಾರ ಮಾಡುತ್ತಿದ್ದಾರೆ. ಮೇ 7ರಂದು ಶಿವಮೊಗ್ಗ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ. ವಿಶೇಷ ಎಂದರೆ ಸ್ಯಾಂಡಲ್ವುಡ್ನ ಅನೇಕ ಸೆಲೆಬ್ರಿಟಿಗಳು ಗೀತಾ ಪರ ಪ್ರಚಾರ ಮಾಡಲಿದ್ದಾರಂತೆ. ಈ ಬಗ್ಗೆ ಶಿವಣ್ಣ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ‘ಧ್ರುವ ಸರ್ಜಾ, ದುನಿಯಾ ವಿಜಯ್, ನೆನಪಿರಲಿ ಪ್ರೇಮ್ ಸೇರಿ ಅನೇಕ ಸೆಲೆಬ್ರಿಟಿಗಳು ಪ್ರಚಾರಕ್ಕೆ ಬರುತ್ತಾರೆ’ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ಗೀತಾ ಅವರ ವಿರುದ್ಧ ಬಿಜೆಪಿಯಿಂದ ಬಿವೈ ರಾಘವೇಂದ್ರ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಈಶ್ವರಪ್ಪ ಸ್ಪರ್ಧೆ ಮಾಡಿದ್ದಾರೆ. ಈ ಕಾರಣದಿಂದಲೂ ಶಿವಮೊಗ್ಗ ಕಣ ಕುತೂಹಲ ಮೂಡಿಸಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.