‘ಮೊದಲ ಬಾರಿಗೆ ಹೀಗೆ ಆಗ್ತಿರೋದು’; ಪತ್ನಿ ಗೀತಾಗೆ ಸಿಕ್ಕ ಬೆಂಬಲ ನೋಡಿ ಶಿವಣ್ಣ ಖುಷ್

Updated on: Mar 22, 2024 | 8:10 AM

ಗೀತಾ ಶಿವರಾಜ್​ಕುಮಾರ್ ಅವರು ಸಿನಿಮಾ ನಿರ್ಮಾಣದ ಜೊತೆ ರಾಜಕೀಯದಲ್ಲೂ ತೊಡಗಿಕೊಂಡಿದ್ದಾರೆ. ಅವರು ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್​ನ ಪ್ರತಿನಿಧಿಸುತ್ತಿದ್ದಾರೆ. ಅವರು ಈಗಾಗಲೇ ಪ್ರಚಾರ ಆರಂಭಿಸಿದ್ದಾರೆ. ಸತತವಾಗಿ ಅವರು ಪ್ರಚಾರ ಕಾರ್ಯದಲ್ಲಿ ಭಾಗಿ ಆಗಲಿದ್ದಾರೆ.

ಗೀತಾ ಶಿವರಾಜ್​ಕುಮಾರ್ (Geetha Shivarajkumar) ಅವರು ಸಿನಿಮಾ ನಿರ್ಮಾಣದ ಜೊತೆ ರಾಜಕೀಯದಲ್ಲೂ ತೊಡಗಿಕೊಂಡಿದ್ದಾರೆ. ಅವರು ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್​ನ ಪ್ರತಿನಿಧಿಸುತ್ತಿದ್ದಾರೆ. ಅವರು ಈಗಾಗಲೇ ಪ್ರಚಾರ ಆರಂಭಿಸಿದ್ದಾರೆ. ಸತತವಾಗಿ ಅವರು ಪ್ರಚಾರ ಕಾರ್ಯದಲ್ಲಿ ಭಾಗಿ ಆಗಲಿದ್ದಾರೆ. ನಟ ಶಿವರಾಜ್​ಕುಮಾರ್ ಅವರು ಪತ್ನಿಯ ಬೆಂಬಲಕ್ಕೆ ನಿಂತಿದ್ದಾರೆ. ಅವರು ಪ್ರಚಾರ ಕಾರ್ಯದಲ್ಲಿ ಭಾಗಿ ಆಗುತ್ತಿದ್ದಾರೆ. ನಿರ್ಮಾಪಕರ ಸಂಘದವರು ಗೀತಾ ಅವರಿಗೆ ಬೆಂಬಲ ನೀಡಿದ್ದಾರೆ. ಇದರಿಂದ ಅವರು ಸಖತ್ ಖುಷಿಯಾಗಿದ್ದಾರೆ. ‘ಈ ರೀತಿ ಎಲ್ಲರೂ ಒಟ್ಟಿಗೆ ಬಂದು ಪ್ರಚಾರ ಮಾಡುತ್ತಿರುವುದು ಇದೇ ಮೊದಲು’ ಎಂದು ಶಿವರಾಜ್​ಕುಮಾರ್ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More