‘ತಾಯಾಣೆ ಆ ವಿಚಾರ ಗೊತ್ತಿಲ್ಲ’; ನೇರ ಮಾತುಗಳಲ್ಲಿ ಹೇಳಿದ ಶಿವಣ್ಣ
ಶಿವರಾಜ್ಕುಮಾರ್ ಲೋಕಸಭೆ ಚುನಾವಣೆಯಲ್ಲಿ ಪತ್ನಿ ಗೀತಾ ಶಿವರಾಜ್ಕುಮಾರ್ ಪರ ಪ್ರಚಾರ ಮಾಡುತ್ತಿದ್ದಾರೆ. ಇತ್ತೀಚೆಗೆ ಅವರ ವಿರುದ್ಧ ಭಾರತೀಯ ಜನತಾ ಪಾರ್ಟಿಯ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದಿಂದ ದೂರು ನೀಡಲಾಗಿದೆ. ಈ ಬಗ್ಗೆ ಶಿವಣ್ಣ ಮಾತನಾಡಿದ್ದಾರೆ.
ಶಿವರಾಜ್ಕುಮಾರ್ (Shivarajkumar) ಅವರು ಲೋಕಸಭೆ ಚುನಾವಣೆಯಲ್ಲಿ ಪತ್ನಿ ಗೀತಾ ಶಿವರಾಜ್ಕುಮಾರ್ ಪರ ಪ್ರಚಾರ ಮಾಡುತ್ತಿದ್ದಾರೆ. ಅವರು ಸದ್ಯ ಸಿನಿಮಾ ಕೆಲಸಗಳಿಗ್ರೆ ಬ್ರೇಕ್ ಕೊಟ್ಟಿದ್ದಾರೆ. ಇತ್ತೀಚೆಗೆ ಅವರ ವಿರುದ್ಧ ಭಾರತೀಯ ಜನತಾ ಪಾರ್ಟಿಯ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದಿಂದ ದೂರು ನೀಡಲಾಗಿದೆ. ಶಿವರಾಜ್ಕುಮಾರ್ ಅವರು ರಾಜಕೀಯ ಪ್ರಚಾರ ಮಾಡುತ್ತಿದ್ದಾರೆ. ಹೀಗಾಗಿ ಸಿನಿಮಾ, ಜಾಹೀರಾತು ಹಾಗೂ ಬಿಲ್ಬೋರ್ಡ್ಗಳನ್ನು ನಿಷೇಧಿಸುವಂತೆ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಈ ಸಂಬಂಧ ಶಿವಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ‘ನನಗೆ ಆ ಬಗ್ಗೆ ಗೊತ್ತಿಲ್ಲ. ಇದನ್ನು ಲೀಗಲ್ ಟೀಂ ನೋಡಿಕೊಳ್ಳುತ್ತದೆ. ಮದರ್ ಪ್ರಾಮಿಸ್, ತಾಯಾಣೆ ಆ ವಿಚಾರ ಗೊತ್ತಿಲ್ಲ’ ಎಂದಿದ್ದಾರೆ ಶಿವಣ್ಣ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Mar 25, 2024 08:31 AM
Latest Videos