‘ತಾಯಾಣೆ ಆ ವಿಚಾರ ಗೊತ್ತಿಲ್ಲ’; ನೇರ ಮಾತುಗಳಲ್ಲಿ ಹೇಳಿದ ಶಿವಣ್ಣ

Updated on: Mar 25, 2024 | 8:32 AM

ಶಿವರಾಜ್​ಕುಮಾರ್ ಲೋಕಸಭೆ ಚುನಾವಣೆಯಲ್ಲಿ ಪತ್ನಿ ಗೀತಾ ಶಿವರಾಜ್​ಕುಮಾರ್ ಪರ ಪ್ರಚಾರ ಮಾಡುತ್ತಿದ್ದಾರೆ. ಇತ್ತೀಚೆಗೆ ಅವರ ವಿರುದ್ಧ ಭಾರತೀಯ ಜನತಾ ಪಾರ್ಟಿಯ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದಿಂದ ದೂರು ನೀಡಲಾಗಿದೆ. ಈ ಬಗ್ಗೆ ಶಿವಣ್ಣ ಮಾತನಾಡಿದ್ದಾರೆ.

ಶಿವರಾಜ್​ಕುಮಾರ್ (Shivarajkumar) ಅವರು ಲೋಕಸಭೆ ಚುನಾವಣೆಯಲ್ಲಿ ಪತ್ನಿ ಗೀತಾ ಶಿವರಾಜ್​ಕುಮಾರ್ ಪರ ಪ್ರಚಾರ ಮಾಡುತ್ತಿದ್ದಾರೆ. ಅವರು ಸದ್ಯ ಸಿನಿಮಾ ಕೆಲಸಗಳಿಗ್ರೆ ಬ್ರೇಕ್ ಕೊಟ್ಟಿದ್ದಾರೆ. ಇತ್ತೀಚೆಗೆ ಅವರ ವಿರುದ್ಧ ಭಾರತೀಯ ಜನತಾ ಪಾರ್ಟಿಯ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದಿಂದ ದೂರು ನೀಡಲಾಗಿದೆ. ಶಿವರಾಜ್​ಕುಮಾರ್​ ಅವರು ರಾಜಕೀಯ ಪ್ರಚಾರ ಮಾಡುತ್ತಿದ್ದಾರೆ. ಹೀಗಾಗಿ ಸಿನಿಮಾ, ಜಾಹೀರಾತು ಹಾಗೂ ಬಿಲ್​ಬೋರ್ಡ್​ಗಳನ್ನು ನಿಷೇಧಿಸುವಂತೆ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಈ ಸಂಬಂಧ ಶಿವಣ್ಣ ಪ್ರತಿಕ್ರಿಯೆ ನೀಡಿದ್ದಾರೆ. ‘ನನಗೆ ಆ ಬಗ್ಗೆ ಗೊತ್ತಿಲ್ಲ. ಇದನ್ನು ಲೀಗಲ್ ಟೀಂ ನೋಡಿಕೊಳ್ಳುತ್ತದೆ. ಮದರ್ ಪ್ರಾಮಿಸ್, ತಾಯಾಣೆ ಆ ವಿಚಾರ ಗೊತ್ತಿಲ್ಲ’ ಎಂದಿದ್ದಾರೆ ಶಿವಣ್ಣ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Mar 25, 2024 08:31 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More