‘ಬೈರಾಗಿ’ ಸಿನಿಮಾ ಬಗ್ಗೆ ಹೊಸ ಅಪ್ಡೇಟ್ ನೀಡಿದ ಶಿವಣ್ಣ
ದೊಡ್ಡ ಬಜೆಟ್ನ ಚಿತ್ರಗಳು ಬೇರೆ ಭಾಷೆಗೆ ಡಬ್ ಆಗಿ ತೆರೆಕಾಣುತ್ತಿದೆ. ‘ಬೈರಾಗಿ’ ಕೂಡ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಬಹುದು ಎಂಬುದು ಅನೇಕರ ಊಹೆ ಆಗಿತ್ತು. ಈ ಬಗ್ಗೆ ಶಿವಣ್ಣ ಅಪ್ಡೇಟ್ ನೀಡಿದ್ದಾರೆ.
ಶಿವರಾಜ್ಕುಮಾರ್ ಅವರು (Shivarajkumar) ‘ಬೈರಾಗಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಸದ್ಯ ಪ್ಯಾನ್ ಇಂಡಿಯಾ ಟ್ರೆಂಡ್ ಜೋರಾಗಿದೆ. ದೊಡ್ಡ ಬಜೆಟ್ನ ಚಿತ್ರಗಳು ಬೇರೆ ಭಾಷೆಗೆ ಡಬ್ ಆಗಿ ತೆರೆಕಾಣುತ್ತಿದೆ. ‘ಬೈರಾಗಿ’ (Bairagi Movie) ಕೂಡ ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಬಹುದು ಎಂಬುದು ಅನೇಕರ ಊಹೆ ಆಗಿತ್ತು. ಈ ಬಗ್ಗೆ ಶಿವಣ್ಣ ಅಪ್ಡೇಟ್ ನೀಡಿದ್ದಾರೆ. ‘ಇಡೀ ಸಿನಿಮಾದ ಕಥೆ ಹುಲಿ ವೇಷದ ಮೇಲೆ ಸಾಗುತ್ತದೆ. ಈ ಚಿತ್ರ ಕನ್ನಡದಲ್ಲಿ ಮಾತ್ರ ತೆರೆಗೆ ಬರುತ್ತಿದೆ. ಇದು ಪ್ಯಾನ್ ಇಂಡಿಯಾ ಅಲ್ಲ’ ಎಂದಿದ್ದಾರೆ ಶಿವಣ್ಣ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಖಾಸಗಿ ಹೋಟೆಲ್ ಒಂದರ ಉದ್ಘಾಟನೆ ಕಾರ್ಯಕ್ರಮಕ್ಕೆ ಶಿವಣ್ಣ ತೆರಳಿದ್ದರು. ಈ ವೇಳೆ ಅವರು ಈ ವಿಚಾರ ಹಂಚಿಕೊಂಡಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: May 26, 2022 07:32 PM