ಹಂಪಿ ಉತ್ಸವದಲ್ಲಿ ಡ್ಯಾನ್ಸ್ ಮಾಡಿ ರಂಜಿಸಿದ ಶಿವರಾಜ್​​ಕುಮಾರ್

Updated on: Feb 14, 2026 | 11:43 AM

ನಟ ಶಿವರಾಜ್​​ಕುಮಾರ್ ಅವರ ಎನರ್ಜಿ ಯಾವಾಗಲೂ ಕಡಿಮೆ ಆಗುವಂಥದ್ದಲ್ಲ. ಅವರು ಆಪರೇಷನ್ ಆದ ಬಳಿಕ ಮತ್ತೆ ಆ್ಯಕ್ಟೀವ್ ಆಗಿದ್ದಾರೆ. ಸಿನಿಮಾ ಮಾಡುತ್ತಿದ್ದಾರೆ. ಈಗ ಅವರ ಹೊಸ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಈ ವಿಡಿಯೋ ಗಮನ ಸೆಳೆಯೋ ರೀತಿಯಲ್ಲಿ ಇದೆ. ಆ ಬಗ್ಗೆ ಇಲ್ಲಿದೆ ವಿವರ.

ಶಿವರಾಜ್​ಕುಮಾರ್ ಅವರು ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಈಗ ಹಂಪಿ ಉತ್ಸವದಲ್ಲಿ ಭರ್ಜರಿಯಾಗಿ ಡ್ಯಾನ್ಸ್ ಮಾಡಿದ್ದಾರೆ. ಅವರಿಗೆ 60+ ವರ್ಷವಾಯಿತು ಎಂದು ಯಾರೂ ಹೇಳಲು ಸಾಧ್ಯವಿಲ್ಲ. ಹಂಪಿ ಉತ್ಸವ ಪ್ರತಿ ವರ್ಷವೂ ಅದ್ದೂರಿಯಾಗಿ ನಡೆಯುತ್ತದೆ. ಚಿತ್ರರಂಗದ ಅನೇಕರು ಇದರಲ್ಲಿ ಭಾಗಿ ಆಗುತ್ತಾರೆ. ಈ ಬಾರಿ ಶಿವಣ್ಣ ಭಾಗಿ ಆಗಿದ್ದು ವಿಶೇಷವಾಗಿತ್ತು. ಶಿವಣ್ಣ ಅವರು ಹಲವು ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ಕನ್ನಡದ ಜೊತೆಗೆ ಪರಭಾಷೆಯಲ್ಲೂ ಅವರು ಆ್ಯಕ್ಟೀವ್ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More