ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಐತಿಹಾಸಿಕ ‘ಶ್ರೀರಂಗಪಟ್ಟಣ ದಸರಾ ಮಹೋತ್ಸವ’ ನಡೆಯುತ್ತಿದೆ. ಶ್ರೀರಂಗಪಟ್ಟಣದ ರಂಗನಾಥ ಮೈದಾನದಲ್ಲಿ ಅಪಾರ ಸಂಖ್ಯೆಯ ಜನರು ಪಾಲ್ಗೊಂಡಿದ್ದಾರೆ. ಈ ಸಮಾರಂಭಕ್ಕೆ ಶಿವರಾಜ್ಕುಮಾರ್ ಅವರು ಆಗಮಿಸಿದ್ದಾರೆ. ಕಾರ್ಯಕ್ರಮದ ವೇದಿಕೆಗೆ ಶಿವಣ್ಣ ಎಂಟ್ರಿ ನೀಡಿದಾಗ ಅಭಿಮಾನಿಗಳು ಜೈಕಾರ ಕೂಗಿದರು. ಈ ವೇಳೆ ಅವರಿಗೆ ಸನ್ಮಾನ ಮಾಡಲಾಯಿತು.
ಶ್ರೀರಂಗಪಟ್ಟಣ ದಸರಾ ಮಹೋತ್ಸವದಲ್ಲಿ ಶಿವರಾಜ್ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾದ ಟೀಸರ್ ಪ್ರದರ್ಶನ ಮಾಡಲಾಯಿತು. ಅಭಿಮಾನಿಗಳು ಖುಷಿಯಿಂದ ಕೇಕೆ ಹಾಕಿದರು. ‘ಈ ಕಾರ್ಯಕ್ರಮಕ್ಕೆ ಬಂದಿರೋದು ಬಹಳ ಖುಷಿ ಅನಿಸಿದೆ. ಶ್ರೀರಂಗಪಟ್ಟಣ, ಮೈಸೂರು ಸುತ್ತಮುತ್ತ ಶೂಟಿಂಗ್ ಮಾಡಿದ ಸಿನಿಮಾಗಳು ಹಿಟ್ ಆಗುತ್ತವೆ. ಈ ಸ್ಥಳದ ಮಹಿಮೆ ಹಾಗಿದೆ. ಹಬ್ಬ ಬಂದಾಗ ಎಲ್ಲರೂ ಭಾಗವಹಿಸಬೇಕು. ಕನ್ನಡಿಗರಿಗೆ ಅವಕಾಶ ಮಾಡಿಕೊಟ್ಟಿರುವುದು ಇನ್ನೂ ಖುಷಿಯಾಗಿದೆ’ ಎಂದು ಶಿವರಾಜ್ಕುಮಾರ್ ಹೇಳಿದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos