Bhairathi Ranagal: ಅದ್ದೂರಿಯಾಗಿ ಸೆಟ್ಟೇರಿತು ‘ಭೈರತಿ ರಣಗಲ್​’ ಸಿನಿಮಾ; ಮುಹೂರ್ತದಲ್ಲಿ ಶಿವಣ್ಣ ಹೇಳಿದ್ದೇನು?

Updated on: May 26, 2023 | 12:02 PM

Shivarajkumar: ‘ಭೈರತಿ ರಣಗಲ್​’ ಮುಹೂರ್ತ ಸಮಾರಂಭದಲ್ಲಿ ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ. ‘ಗೀತಾ ಪಿಕ್ಚರ್ಸ್​’ ಬ್ಯಾನರ್​ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಮುಹೂರ್ತ ಸಮಾರಂಭದ ವಿಡಿಯೋ ಇಲ್ಲಿದೆ..

ನಿರ್ದೇಶಕ ನರ್ತನ್​ (Narthan), ನಟರಾದ ಶಿವರಾಜ್​ಕುಮಾರ್​ (Shivarajkumar), ಶ್ರೀಮುರಳಿ ಕಾಂಬಿನೇಷನ್​ನಲ್ಲಿ ಬಂದ ‘ಮಫ್ತಿ’ ಸಿನಿಮಾ ಜನರ ಮೆಚ್ಚುಗೆ ಗಳಿಸಿತ್ತು. ಆ ಚಿತ್ರದಲ್ಲಿ ಶಿವಣ್ಣ ಮಾಡಿದ ಭೈರತಿ ರಣಗಲ್​ ಎಂಬ ಪಾತ್ರ ಸಖತ್​ ಹೈಲೈಟ್​ ಆಗಿತ್ತು. ಈಗ ಅದೇ ಶೀರ್ಷಿಕೆಯಲ್ಲಿ ಹೊಸ ಸಿನಿಮಾ ಸೆಟ್ಟೇರಿದೆ. ಮುಹೂರ್ತ ಸಮಾರಂಭದಲ್ಲಿ ಸಿನಿಮಾದ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ. ‘ಗೀತಾ ಪಿಕ್ಚರ್ಸ್​’ ಬ್ಯಾನರ್​ ಮೂಲಕ ‘ಭೈರತಿ ರಣಗಲ್​’ (Bhairathi Ranagal) ನಿರ್ಮಾಣ ಆಗುತ್ತಿದೆ. ಈ ಸಿನಿಮಾ ಸೆಟ್ಟೇರಲು ಇಷ್ಟು ಸಮಯ ತೆಗೆದುಕೊಂಡಿದ್ದು ಯಾಕೆ? ಪಾತ್ರಕ್ಕಾಗಿ ಶಿವಣ್ಣ ಮಾಡಿಕೊಳ್ಳುತ್ತಿರುವ ತಯಾರಿ ಏನು ಎಂಬಿತ್ಯಾದಿ ವಿಚಾರಗಳ ಬಗ್ಗೆ ಅವರು ಮಾತನಾಡಿದ್ದಾರೆ. ಆ ವಿಡಿಯೋ ಇಲ್ಲಿದೆ..

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More