‘ಕಾಂತಾರ: ಚಾಪ್ಟರ್ 1’ ಸಿನಿಮಾ ಯಶಸ್ಸಿನ ಬಗ್ಗೆ ಶಿವರಾಜ್​​ಕುಮಾರ್ ಹೇಳಿದ್ದೇನು?

Updated on: Oct 12, 2025 | 6:14 PM

ರಿಷಬ್ ಶೆಟ್ಟಿ ನಿರ್ದೇಶಿಸಿದ ‘ಕಾಂತಾರ: ಚಾಪ್ಟರ್ 1’ ಚಿತ್ರ ಬ್ಲಾಕ್ ಬಸ್ಟರ್ ಹಿಟ್ ಆಗಿದೆ. ಈ ಚಿತ್ರದ ಬಗ್ಗೆ ಎಲ್ಲರೂ ಮಾತಾಡುತ್ತಿದ್ದಾರೆ. ಪ್ರೇಕ್ಷಕರು ಮಾತ್ರವಲ್ಲದೇ ಸಿನಿಮಾ ರಂಗದ ಸೆಲೆಬ್ರಿಟಿಗಳು ಸಹ ಮೆಚ್ಚುಗೆ ಸೂಚಿಸಿದ್ದಾರೆ. ನಟ ಶಿವರಾಜ್​​ಕುಮಾರ್ ಅವರು ಈ ಕುರಿತು ತಮ್ಮ ಅನಿಸಿಕೆ ತಿಳಿಸಿದ್ದಾರೆ.

ರಿಷಬ್ ಶೆಟ್ಟಿ (Rishab Shetty) ನಿರ್ದೇಶನ ಮಾಡಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆಗಿದೆ. ಈ ಸಿನಿಮಾ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದಾರೆ. ಪ್ರೇಕ್ಷಕರು ಮಾತ್ರವಲ್ಲದೇ ಚಿತ್ರರಂಗದ ಸೆಲೆಬ್ರಿಟಿಗಳು ಕೂಡ ಮೆಚ್ಚುಗೆ ಸೂಚಿಸಿದ್ದಾರೆ. ನಟ ಶಿವರಾಜ್​​ಕುಮಾರ್ (Shivarajkumar) ಅವರು ಈ ಕುರಿತು ತಮ್ಮ ಅನಿಸಿಕೆ ತಿಳಿಸಿದ್ದಾರೆ. ದೊಡ್ಡ ಬಳ್ಳಾಪುರದಲ್ಲಿ ಮಾಧ್ಯಮಗಳ ಜೊತೆ ಮಾತನಾಡುವಾಗ ‘ಕಾಂತಾರ: ಚಾಪ್ಟರ್ 1’ (Kantara Chapter 1) ಯಶಸ್ಸಿನ ಬಗ್ಗೆ ಎದುರಾದ ಪ್ರಶ್ನೆಗೆ ಅವರು ಉತ್ತರಿಸಿದರು. ‘ಒಂದು ಕನ್ನಡ ಸಿನಿಮಾ ಈ ಮಟ್ಟಕ್ಕೆ ಹೋಗಿದೆ ಎಂದರೆ ನಮಗೆ ಬಹಳ ಖುಷಿ ಆಗುತ್ತದೆ’ ಎಂದು ಶಿವಣ್ಣ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More