Puneeth Rajkumar: ಅಪ್ಪು ಅರ್ಧಕ್ಕೆ ಬಿಟ್ಟ ಚಿತ್ರಗಳ ಬಗ್ಗೆ ಶಿವಣ್ಣನ ಮಾತು; ಜೇಮ್ಸ್ ಚಿತ್ರಕ್ಕೆ ವಾಯ್ಸ್ ಕೊಡೋದು ಯಾರು?
James Kannada Movie: ಮಾ.17 ಪುನೀತ್ ರಾಜ್ಕುಮಾರ್ ಬರ್ತ್ಡೇ. ಆ ದಿನವೇ ‘ಜೇಮ್ಸ್’ ರಿಲೀಸ್ ಮಾಡಬೇಕು ಎಂದು ಚಿತ್ರತಂಡ ಗುರಿ ಇಟ್ಟುಕೊಂಡಿದೆ. ಪುನೀತ್ ಪಾತ್ರಕ್ಕೆ ಶಿವರಾಜ್ಕುಮಾರ್ ಧ್ವನಿ ನೀಡುವ ಸಾಧ್ಯತೆ ಇದೆ.
ಹೃದಯಾಘಾತದಿಂದ ನಿಧನರಾಗುವುದಕ್ಕೂ ಮುನ್ನ ಪುನೀತ್ ರಾಜ್ಕುಮಾರ್ ಅವರು ಹಲವು ಪ್ರಾಜೆಕ್ಟ್ಗಳಲ್ಲಿ ತೊಡಗಿಕೊಂಡಿದ್ದರು. ಆ ಪೈಕಿ ‘ಜೇಮ್ಸ್’ ಸಿನಿಮಾ ಬಗ್ಗೆ ಫ್ಯಾನ್ಸ್ ಹೆಚ್ಚು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ನಿರ್ದೇಶಕ ಚೇತನ್ ಕುಮಾರ್ ಅವರು ಈ ಸಿನಿಮಾದ ಬಹುತೇಕ ಶೂಟಿಂಗ್ ಪೂರ್ಣಗೊಳಿಸಿದ್ದಾರೆ. ಆದರೆ ಡಬ್ಬಿಂಗ್ ಪೂರ್ಣಗೊಳ್ಳುವುದಕ್ಕೂ ಮುನ್ನವೇ ಪುನೀತ್ ರಾಜ್ಕುಮಾರ್ ಇಹಲೋಕ ತ್ಯಜಿಸಿದ್ದಾರೆ. ಹಾಗಾದರೆ ಈ ಚಿತ್ರದಲ್ಲಿನ ಪುನೀತ್ ಪಾತ್ರಕ್ಕೆ ಧ್ವನಿ ನೀಡುವವರು ಯಾರು? ಈ ಬಗ್ಗೆ ಶಿವರಾಜ್ಕುಮಾರ್ ಮಾತನಾಡಿದ್ದಾರೆ.
ಶಿವರಾಜ್ಕುಮಾರ್ ಧ್ವನಿ ನೀಡಲಿ ಎಂಬ ಆಸೆಯನ್ನು ಅಭಿಮಾನಿಗಳು ವ್ಯಕ್ತಪಡಿಸುತ್ತಿದ್ದಾರೆ. ಆ ಕುರಿತು ತಮ್ಮ ಅಭಿಪ್ರಾಯ ಏನು ಎಂಬುದನ್ನು ಶಿವಣ್ಣ ತಿಳಿಸಿದ್ದಾರೆ. ‘ಈವರೆಗೂ ನನ್ನ ಬಳಿ ಆ ರೀತಿಯ ಯಾವುದೇ ಪ್ರಸ್ತಾಪ ಬಂದಿಲ್ಲ. ಒಂದು ವೇಳೆ ಬಂದರೆ ಖಂಡಿತ ಮಾಡುವುದರಲ್ಲಿ ತಪ್ಪಿಲ್ಲ. ನನ್ನ ತಮ್ಮನಿಗೆ ವಾಯ್ಸ್ ಕೊಡಲು ನನಗೆ ನಿಜವಾಗಿಯೂ ಹೆಮ್ಮೆ ಎನಿಸುತ್ತದೆ’ ಎಂದು ಶಿವರಾಜ್ಕುಮಾರ್ ಹೇಳಿದ್ದಾರೆ. ಮಾ.17 ಪುನೀತ್ ರಾಜ್ಕುಮಾರ್ ಬರ್ತ್ಡೇ. ಆ ದಿನವೇ ‘ಜೇಮ್ಸ್’ ರಿಲೀಸ್ ಮಾಡಬೇಕು ಎಂದು ಚಿತ್ರತಂಡ ಗುರಿ ಇಟ್ಟುಕೊಂಡಿದೆ.
ಇದನ್ನೂ ಓದಿ:
Puneeth Rajkumar: ಅಶ್ಲೀಲ ಪದಗಳಿಂದ ಪುನೀತ್ಗೆ ಅವಮಾನ; ಜನರಿಗೆ ಮನುಷ್ಯತ್ವ ಇಲ್ವಾ? ಸುದೀಪ್ ಪುತ್ರಿ ಸಾನ್ವಿ ಗರಂ
Puneeth Rajkumar: ‘ಪುನೀತ್ ಅತಿಯಾಗಿ ಜಿಮ್ ಮಾಡಿದ್ರು’: ಕರಾಳ ಶುಕ್ರವಾರದ ಘಟನೆ ವಿವರಿಸಿದ ಸೆಕ್ಯೂರಿಟಿ ಸಿಬ್ಬಂದಿ