Karnataka Assembly Polls: ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರ ಶಿವರಾಜ್ ಕುಮಾರ್ ಪ್ರಚಾರ, ಆಯ್ದ ಕ್ಷೇತ್ರಗಳಲ್ಲಿ ಮಾತ್ರ ಪ್ರವಾಸ
ಶೂಟಿಂಗ್ ಕಾರಣ ತನಗೆ ಎಲ್ಲ ಕ್ಷೇತ್ರಗಳಲ್ಲಿ ಪ್ರಚಾರ ಮಾಡಲು ಸಾಧ್ಯವಾಗಲಾರದು, ಕೆಲ ಆಯ್ದ ಕ್ಷೇತ್ರಗಳಿಗೆ ಮಾತ್ರ ಹೋಗುವುದಾಗಿ ಶಿವರಾಜ್ ಕುಮಾರ್ ಹೇಳಿದರು.
ಶಿವಮೊಗ್ಗ: ನಗರದಲ್ಲಿಂದು ಸುದ್ದಿಗೋಷ್ಟಿಯೊಂದನ್ನು ನಡೆಸಿ ಚಿತ್ರನಟ ಶಿವರಾಜ್ ಕುಮಾರ್ (Shivarajkumar) ಕಾಂಗ್ರೆಸ್ ಪಕ್ಷದ ಪರವಾಗಿ ಚುನಾವಣಾ ಪ್ರಚಾರಕ್ಕಿಳಿಯುತ್ತಿರುವುದಾಗಿ ಹೇಳಿದರು. ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ (Geeta Shivarajkumar) ಕಳೆದ ವಾರ ಕಾಂಗ್ರೆಸ್ ಸೇರಿದಾಗಲೇ ಹಿರಿಯ ನಟ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವುದು ಖಚಿತವಾಗಿತ್ತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರೊಂದಿಗಿನ ಸಂಬಂಧ ಕುರಿತು ಮಾತಾಡಿದ ಅವರು ಅಪ್ಪಾಜಿ ಕಾಲದಿಂದ ಖರ್ಗೆ ಅವರ ಮನೆಗೆ ಹೋಗುವುದು ಅವರು ಅಪ್ಪಾಜಿ ಮನೆಗೆ ಬರೋದು ವಾಡಿಕೆಯಲ್ಲಿದೆ ಎಂದು ಹೇಳಿದರು. ಶೂಟಿಂಗ್ ಕಾರಣ ತನಗೆ ಎಲ್ಲ ಕ್ಷೇತ್ರಗಳಲ್ಲಿ ಪ್ರಚಾರ ಮಾಡಲು ಸಾಧ್ಯವಾಗಲಾರದು, ಕೆಲ ಆಯ್ದ ಕ್ಷೇತ್ರಗಳಿಗೆ ಮಾತ್ರ ಹೋಗುವುದಾಗಿ ಶಿವರಾಜ್ ಕುಮಾರ್ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: May 01, 2023 10:17 AM