‘ಆಲ್​ ದಿ ಬೆಸ್ಟ್​ ಟಾಕ್ಸಿಕ್’: ಟ್ರೈಲರ್​ ಲಾಂಚ್ ಮಾಡಿದ ಶಿವಣ್ಣ

Updated on: Aug 08, 2026 | 8:16 PM

ಶಿವರಾಜ್‌ಕುಮಾರ್ ಅವರು ಟಾಕ್ಸಿಕ್ ಚಿತ್ರದ ಟ್ರೈಲರ್ ಅನ್ನು ಬೆಂಗಳೂರಿನ AMB ಕಾಪಾಲಿ ಮಾಲ್‌ನಲ್ಲಿ ಬಿಡುಗಡೆ ಮಾಡಿದರು. ಯಶ್‌ಗೆ "ಆಲ್ ದಿ ಬೆಸ್ಟ್ ಟಾಕ್ಸಿಕ್" ಎಂದು ಶುಭ ಹಾರೈಸಿದರು. ಈ ಡಾರ್ಕ್ ಥ್ರಿಲ್ಲರ್ ಚಿತ್ರದಲ್ಲಿ ಯಶ್ ಜೊತೆಗೆ ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಮತ್ತು ರುಕ್ಮಿಣಿ ವಸಂತ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದು, ಈ ತಿಂಗಳ 26 ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.

ಬೆಂಗಳೂರು, ಆಗಸ್ಟ್​​​ 08: ರಾಕಿಂಗ್​​ ಸ್ಟಾರ್​ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್’ ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಆಗಸ್ಟ್​ 26ರಂದು ಚಿತ್ರ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ. ಇಂದು ಬೆಂಗಳೂರಿನ ಎಎಂಬಿ ಮಾಲ್​​ನಲ್ಲಿ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ನಡೆಯಿತು. ‘ಆಲ್ ದಿ ಬೆಸ್ಟ್ ಟಾಕ್ಸಿಕ್’ ಎಂದು ಚಿತ್ರತಂಡಕ್ಕೆ ಶುಭ ಕೋರುವ ಮೂಲಕ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಟ್ರೇಲರ್ ಬಿಡುಗಡೆ ಮಾಡಿದರು. ಇನ್ನು ಟ್ರೈಲರ್ ರಿಲೀಸ್ ಇವೆಂಟ್​ನಲ್ಲಿ ನಟಿ ರುಕ್ಮಿಣಿ ವಸಂತ್ ಸೇರಿದಂತೆ ಎಲ್ಲಾ ನಟಿಯರು ಹಾಗೂ ಅಕ್ಷಯ್ ಒಬೆರಾಯ್ ಭಾಗಿಯಾಗಿದ್ದಾರೆ.

ಮತ್ತಷ್ಟು ಸಿನಿಮಾ ವಿಡಿಯೋಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Aug 08, 2026 08:13 PM
Loading...
Unable to load recommendations.
Follow Us
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More