Shivaram: ‘ಇದನ್ನು ನಾವು ಒಪ್ಪಿಕೊಳ್ಳಲೇ ಬೇಕು’; ಶಿವರಾಂ ಸಾವಿನ ಬಗ್ಗೆ ಪುತ್ರ ಲಕ್ಷ್ಮೀಶ್ ಮಾತು
ಚಿಕಿತ್ಸೆ ಫಲಕಾರಿಯಾಗದೆ ಶಿವರಾಂ ಮೃತಪಟ್ಟಿದ್ದಾರೆ. ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆ ಅಪಾರ. ಹಿರಿತೆರೆ ಹಾಗೂ ಕಿರುತೆರೆ ಎರಡರಲ್ಲೂ ಶಿವರಾಂ ಗುರುತಿಸಿಕೊಂಡಿದ್ದರು.
ಹಿರಿಯ ನಟ ಶಿವರಾಂ ಅವರು ಇಂದು (ಡಿಸೆಂಬರ್ 4) ನಿಧನ ಹೊಂದಿದ್ದಾರೆ. ಹಲವು ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಅವರನ್ನು ಉಳಿಸಿಕೊಳ್ಳೋಕೆ ಸಾಧ್ಯವಾಗಲೇ ಇಲ್ಲ. ಅವರ ನಿಧನದ ಬಗ್ಗೆ ಮಗ ಲಕ್ಷ್ಮೀಶ್ ಹೇಳಿಕೆ ನೀಡಿದ್ದಾರೆ. ‘ನಮ್ಮ ತಂದೆ ಶಿವರಾಮ್ ಇನ್ನು ನಮ್ಮ ಜತೆ ಇಲ್ಲ. ಶಿವರಾಮ್ ಅವರು ಭಗವಂತನ ಪಾದ ಸೇರಿದ್ದಾರೆ. ಆಸ್ಪತ್ರೆ ವತಿಯಿಂದ ಎಲ್ಲಾ ರೀತಿ ಚಿಕಿತ್ಸೆ ನೀಡಿದ್ದಾರೆ. ಆದರೆ ಶಿವರಾಮ್ರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಇದನ್ನು ನಾವು ಒಪ್ಪಿಕೊಳ್ಳಲೇ ಬೇಕು’ ಎಂದು ಮಾಹಿತಿ ನೀಡಿದರು. ಅವರ ನಿಧನಕ್ಕೆ ಇಡೀ ಚಿತ್ರರಂಗ ಸಂತಾಪ ಸೂಚಿಸುತ್ತಿದೆ. ಹಿರಿಯ ನಟ ಶಿವರಾಂ ಅವರು ಇಂದು (ಡಿಸೆಂಬರ್ 4) ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅವರು ಮನೆಗೆ ಮರಳಿದ್ದರು. ನಂತರ ಅವರ ಆರೋಗ್ಯ ಮತ್ತೆ ಗಂಭೀರವಾಗಿತ್ತು. ಹೀಗಾಗಿ ಮತ್ತೆ ಆಸ್ಪತ್ರೆ ದಾಖಲು ಮಾಡಲಾಗಿತ್ತು. ಈಗ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆ ಅಪಾರ. ಹಿರಿತೆರೆ ಹಾಗೂ ಕಿರುತೆರೆ ಎರಡರಲ್ಲೂ ಶಿವರಾಂ ಗುರುತಿಸಿಕೊಂಡಿದ್ದರು.
ಇದನ್ನೂ ಓದಿ: Shivaram Obituary: ಗುಬ್ಬಿ ವೀರಣ್ಣ ನಾಟಕಗಳಿಂದ ಸ್ಫೂರ್ತಿ ಪಡೆದಿದ್ದ ಶಿವರಾಂ; ಚಿತ್ರರಂಗಕ್ಕೆ ಅವರು ನೀಡಿದ ಕೊಡುಗೆ ಅಪಾರ