ಕೆಪಿಎಸ್ಸಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್,ಸದಸ್ಯೆ ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಹಗರಣ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಹಾಗೂ ಸದಸ್ಯೆ ಗೀತಾ ಅವರಿಗೆ ಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ಕೆಪಿಎಸ್ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಹಗರಣ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಹಾಗೂ ಸದಸ್ಯೆ ಗೀತಾ ಅವರನ್ನು ಇಡಿ ವಶಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.
ಬೆಂಗಳೂರು, (ಅಕ್ಟೋಬರ್ 07): ಕೆಪಿಎಸ್ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಹಗರಣ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಹಾಗೂ ಸದಸ್ಯೆ ಗೀತಾ ಅವರನ್ನು ಇಡಿ ವಶಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. ಇನ್ನೊಂದೆಡೆ ಶಿವಶಂಕರಪ್ಪ ಮಧ್ಯಂತರ ಜಾಮೀನಿಗೆ ಅರ್ಜಿ ಸಲ್ಲಿದ್ದು, ಪ್ರಕರಣದ ಬಗ್ಹೆ ರಾಜ್ಯ ಮತ್ತು ಕೇಂದ್ರ ತನಿಖಾ ತಂಡ ಪೈಪೋಟಿಗೆ ಬಿದ್ದಿರೋ ತರ ಇದೆ. ಪ್ರಕರಣದ ಯಾವುದೇ ಹಣ ರಿಕವರಿ ಆಗಿಲ್ಲ. ನಮ್ಮ ಕಕ್ಷಿದಾರರು ಎಲ್ಲೂ ಹೋಗಲ್ಲ, ಇಲ್ಲೇ ಇರ್ತಾರೆ. ತನಿಖೆಗೆ ಸಹಕಾರ ಮಾಡ್ತಾರೆ ಕಸ್ಟಡಿಗೆ ಬೇಡ ಎಂದು ಶಿವಶಂಕರಪ್ಪ ಪರ ವಕೀಲ ಮಂಡಿಸಿದ ವಾದ ಆಲಿಸಿದ ಬೆಂಗಳೂರಿನ 4ನೇ ಸಿಸಿಹೆಚ್ ನ್ಯಾಯಾಲಯ, ಅಂತಿಮವಾಗಿ ಶಿವಶಂಕರಪ್ಪ ಸಾಹುಕಾರ್ ಮತ್ತು ಬಿ.ವಿ.ಗೀತಾ ಅವರನ್ನು 13 ದಿನಗಳ ಕಾಲ ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಅಲ್ಲದೇ ಅ.19ರಂದು ಮಧ್ಯಾಹ್ನ 3 ಗಂಟೆಗೆ ಕೋರ್ಟ್ಗೆ ಹಾಜರು ಪಡಿಸಲು ಜಡ್ಜ್ ಸೂಚನೆ ನೀಡಿದ್ದಾರೆ.

