AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನನ್ನು ಎತ್ತಿಕೊಂಡು ಬಂದು ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸಿದ ಕೇಂದ್ರ ಸಚಿವ

ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನನ್ನು ಎತ್ತಿಕೊಂಡು ಬಂದು ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸಿದ ಕೇಂದ್ರ ಸಚಿವ

ಅಕ್ಷಯ್​ ಪಲ್ಲಮಜಲು​​
|

Updated on: Feb 27, 2026 | 5:28 PM

Share

ಕೇಂದ್ರ ಸಚಿವ ಶಿವ್‌ರಾಜ್ ಸಿಂಗ್ ಚೌಹಾಣ್ ಅವರು ಭೋಪಾಲ್‌ನಲ್ಲಿ ಅಪಘಾತಕ್ಕೀಡಾದ ಯುವಕನಿಗೆ ಮಾನವೀಯವಾಗಿ ಸ್ಪಂದಿಸಿದ್ದಾರೆ. ತಮ್ಮ ಬೆಂಗಾವಲು ಪಡೆಯನ್ನು ತಡೆದು, ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸುವ ಮೂಲಕ ಜೀವ ಉಳಿಸಿದರು. ಇದು ಜವಾಬ್ದಾರಿಯುತ ಸ್ಥಾನದಲ್ಲಿರುವವರು ಸಾರ್ವಜನಿಕರ ಕಷ್ಟಕ್ಕೆ ಹೇಗೆ ಸ್ಪಂದಿಸಬೇಕು ಎಂಬುದಕ್ಕೆ ಉತ್ತಮ ನಿದರ್ಶನವಾಗಿದೆ. ಸಚಿವರ ಈ ಕಾರ್ಯ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ.

ಭೋಪಾಲ್‌, ಫೆ.27: ಜವಾಬ್ದಾರಿಯುತ ಸ್ಥಾನದಲ್ಲಿರುವವರು ಜನಸಾಮಾನ್ಯರ ಕಷ್ಟಕ್ಕೆ ಹೇಗೆ ಸ್ಪಂದಿಸಬೇಕು ಎಂಬುದಕ್ಕೆ ಕೇಂದ್ರ ಸಚಿವ ಶಿವ್‌ರಾಜ್ ಸಿಂಗ್ ಚೌಹಾಣ್ ಅವರು ಸಾಕ್ಷಿಯಾಗಿದ್ದಾರೆ. ಭೋಪಾಲ್‌ನ ಚೆತಕ್ ಬ್ರಿಡ್ಜ್ ಬಳಿ ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನನ್ನು ಕಂಡು, ತಮ್ಮ ಬೆಂಗಾವಲು ಪಡೆಯನ್ನು (Convoy) ತಡೆದು ನಿಲ್ಲಿಸಿ ಆತನನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಜೀವ ಉಳಿಸಿದ್ದಾರೆ. ಶಿವ್‌ರಾಜ್ ಸಿಂಗ್ ಚೌಹಾಣ್ ಅವರು ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದಾಗ ಚೆತಕ್ ಬ್ರಿಡ್ಜ್ ಬಳಿ ಜನಸಂದಣಿ ಇರುವುದನ್ನು ಗಮನಿಸಿದರು. ತಕ್ಷಣ ವಾಹನ ನಿಲ್ಲಿಸಿ ವಿಚಾರಿಸಿದಾಗ, ಅಪಘಾತವಾಗಿ ಯುವಕನೊಬ್ಬ ರಕ್ತದ ಮಡುವಿನಲ್ಲಿ ಬಿದ್ದಿರುವುದು ತಿಳಿದುಬಂದಿತು. ಸಚಿವರು ವಿಳಂಬ ಮಾಡದೆ ತಮ್ಮ ಬೆಂಗಾವಲು ಪಡೆಯಲ್ಲಿದ್ದ ವಾಹನವೊಂದರಲ್ಲಿ ಸಂತ್ರಸ್ತನನ್ನು ಹತ್ತಿಸಿ ಹತ್ತಿರದ ಆಸ್ಪತ್ರೆಗೆ ಕಳುಹಿಸಿಕೊಟ್ಟರು. ಯುವಕನನ್ನು ಕಳುಹಿಸಿಕೊಟ್ಟಿದ್ದಷ್ಟೇ ಅಲ್ಲದೆ, ವೈದ್ಯರಿಗೆ ಖುದ್ದಾಗಿ ಫೋನ್ ಮಾಡಿ ತುರ್ತು ಚಿಕಿತ್ಸೆ ನೀಡುವಂತೆ ಸೂಚಿಸಿದರು. ಅಲ್ಲದೆ, ತಮ್ಮ ತಂಡದ ಅಧಿಕಾರಿಯೊಬ್ಬರನ್ನು ಆಸ್ಪತ್ರೆಯಲ್ಲೇ ಉಳಿಸಿ ಯುವಕನ ಆರೋಗ್ಯದ ಬಗ್ಗೆ ಗಮನಹರಿಸುವಂತೆ ತಿಳಿಸಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More