ಬಳ್ಳಾರಿ ಎಸ್‌ಪಿ ಪವನ್ ನೆಜ್ಜೂರ್ ಅಮಾನತು: ಶೋಭಾ ಕರಂದ್ಲಾಜೆ ಸ್ಫೋಟಕ ಆರೋಪ
ಬಳ್ಳಾರಿ ಎಸ್‌ಪಿ ಪವನ್ ನೆಜ್ಜೂರ್ ಅಮಾನತು ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರಿ ಅಧಿಕಾರಿಗಳ ವರ್ಗಾವಣೆ, ಭಡ್ತಿ ಮತ್ತು ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಇದರಿಂದ ಅಧಿಕಾರಿಗಳ ನೈತಿಕ ಸ್ಥೈರ್ಯ ಕುಗ್ಗಿದೆ ಎಂದು ಅವರು ಆರೋಪಿಸಿದ್ದಾರೆ.
ಬೆಂಗಳೂರು, ಜನವರಿ 04: ಬಳ್ಳಾರಿ ಎಸ್‌ಪಿ ಪವನ್ ನೆಜ್ಜೂರ್ ಅಮಾನತು ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ. ಘಟನೆ ನಡೆದ ಸ್ಥಳದಲ್ಲೇ ಪವನ್ ನೆಜ್ಜೂರ್ ಇದ್ದರು ಎಂಬುದಕ್ಕೆ ಮಾಧ್ಯಮ ವರದಿಗಳು ಪುರಾವೆ ಒದಗಿಸಿವೆ. ಆದರೆ ಅವರ ಮೇಲಿನ ಯಾವ ದ್ವೇಷಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂಬುದು ಗೊತ್ತಾಗಬೇಕು. ಜಮೀರ್ ಖಾನ್ ಅವರು ಬಳ್ಳಾರಿ ಎಸ್ಪಿಗೆ ಎಷ್ಟು ಬಿಡ್ಡಿಂಗ್ ಮಾಡಿದ್ದರು ಎಂದು ಅವರು ಪ್ರಶ್ನಿಸಿದ್ದಾರೆ. ಪೊಲೀಸ್ ಅಧಿಕಾರಿಗಳ ವರ್ಗಾವಣೆಗಳಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಇದರಿಂದ ರಾಜ್ಯದ ಪೊಲೀಸ್ ಅಧಿಕಾರಿಗಳ ನೈತಿಕ ಬಲ ಕುಗ್ಗುತ್ತಿದೆ ಎಂದೂ ಶೋಭಾ ಆರೋಪಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Jan 04, 2026 02:15 PM
Latest Videos
