ಶುಗರ್ ಬೋಲ್ ಮಂಡ್ಯದಲ್ಲಿಂದು ಶೋಭಾಯಾತ್ರೆ, ನಗರವೆಲ್ಲ ಕೇಸರಿಮಯ, ಬಿಗಿ ಪೊಲೀಸ್ ಬಂದೋಬಸ್ತ್
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹಿಂದೂಗಳು ನಿಶ್ಶಕ್ತರು ಎಂದು ಬಿಂಬಿಸುವ ಪ್ರಯತ್ನ ನಡೆಸಿದೆ, ಹಿಂದೂ ಧಾರ್ಮಿಕ ಆಚರಣೆಗಳ ಸಂದರ್ಭಗಳಲ್ಲಿ ಕಿಡಿಗೇಡಿಗಳಿಂದ ಅಡ್ಡಿಯನ್ನುಂಟು ಮಾಡುವ ಕೆಲಸ ನಡೆಯುತ್ತಿದೆ, ಹಿಂದೂಗಳು ದುರ್ಬಲರಲ್ಲ ಎಂಬ ಸಂಗತಿಯನ್ನು ಸಹ ಶೋಭಾಯಾತ್ರೆಯ ಮೂಲಕ ಸಾರುವ ನಿಶ್ಚಯವನ್ನು ಸಂಘಟಕರು ಮಾಡಿಕೊಂಡಿದ್ದಾರೆ.
ಮಂಡ್ಯ, ಏಪ್ರಿಲ್ 12: ನಗರದಲ್ಲಿ ಹನುಮ ಜಯಂತಿ ಅಂಗವಾಗಿ ಇಂದು ಸಕ್ಕರೆನಗರಿ ಮಂಡ್ಯದಲ್ಲಿ ಶೋಭಾಯಾತ್ರೆಯನ್ನು ಆಯೋಜಿಸಲಾಗಿದ್ದು ನಗರವೆಲ್ಲ ಕೇಸರಿಮಯವಾಗಿದೆ. ಈಗಾಗಲೇ ವರದಿಯಾಗಿರುವಂತೆ ಶ್ರೀರಾಮಾಂಜನೇಯ ಮಹೋತ್ಸವ ಸಮಿತಿ, ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ, ದುರ್ಗಾವಾಹಿನಿ ಸಂಘಟನೆಗಳು ಶೋಭಾಯಾತ್ರೆಯನ್ನು ಆಯೋಜಿಸಿವೆ. ಯಾತ್ರೆಯ ವೇಳೆ ಯಾವುದೇ ಅಹಿತಕರ ಘಟನೆ ಜರುಗದಂತೆ ಅದು ಸಾಗುವ ಮಾರ್ಗದಲ್ಲಿ ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮಂಡ್ಯದ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ನೀಡಿರುವ ಮಾಹಿತಿ ಪ್ರಕಾರ ಸುಮಾರು 700ಕ್ಕೂ ಹೆಚ್ಚು ಪೊಲೀಸರನ್ನು ಬಂದೋಬಸ್ತ್ಗಾಗಿ ನಿಯೋಜಿಸಲಾಗಿದೆ.
ಇದನ್ನೂ ಓದಿ: ಮಂಡ್ಯದಲ್ಲಿ ಮತ್ತೆ ಹನುಮ ಧ್ವಜ ದಂಗಲ್ ಮುನ್ನೆಲೆಗೆ: ಮತ್ತೊಂದು ಹೋರಾಟಕ್ಕೆ ಮುಂದಾದ ಹಿಂದೂ ಸಂಘಟನೆಗಳು
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ