ಬೆಚ್ಚಿ ಬೀಳಿಸುವ ಅಪಘಾತ; ಡಿವೈಡರ್‌ಗೆ ಡಿಕ್ಕಿ ಹೊಡೆದು ಹೈವೇಯಲ್ಲಿ ಆಟಿಕೆಯಂತೆ ಹಾರಿದ ಸ್ಕಾರ್ಪಿಯೋ
ಉತ್ತರ ಪ್ರದೇಶದ ಕಾನ್ಪುರದಲ್ಲಿ ಈ ಘಟನೆ ನಡೆದಿದ್ದು, ಅತಿ ವೇಗದಲ್ಲಿ ಬಂದ ಸ್ಕಾರ್ಪಿಯೋ ಎಸ್‌ಯುವಿ ಹೆದ್ದಾರಿಯ ಡಿವೈಡರ್‌ಗೆ ಡಿಕ್ಕಿ ಹೊಡೆದು, ಆಟಿಕೆ ಕಾರಿನಂತೆ ಹಾರಿ ಪಕ್ಕಕ್ಕೆ ಉರುಳಿದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಭಯಾನಕ ಅಪಘಾತದ ಘಟನೆ ನೆಟ್ಟಿಗರನ್ನು ಹಾಗೂ ಆ ವೇಳೆ ಅಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರನ್ನು ಬೆಚ್ಚಿ ಬೀಳಿಸಿದೆ. ಕಾನ್ಪುರ್ ದೇಹತ್‌ನ ಅಕ್ಬರ್‌ಪುರ ಪೊಲೀಸ್ ಠಾಣೆ ಪ್ರದೇಶದ ಅಡಿಯಲ್ಲಿ ಬರುವ ಬಾರಾ ಟೋಲ್ ಪ್ಲಾಜಾವನ್ನು ದಾಟಿದ ಸ್ವಲ್ಪ ಸಮಯದ ನಂತರ ಅತಿ ವೇಗದ ಮಹೀಂದ್ರಾ ಸ್ಕಾರ್ಪಿಯೋ ಎಸ್‌ಯುವಿ ನಿಯಂತ್ರಣ ಕಳೆದುಕೊಂಡು ಹೆದ್ದಾರಿಯಲ್ಲಿರುವ ಡಿವೈಡರ್‌ಗೆ ಡಿಕ್ಕಿ ಹೊಡೆದಿರುವುದನ್ನು ವಿಡಿಯೋದಲ್ಲಿ ನೋಡಬಹುದು.
ಭಯಾನಕ ಅಪಘಾತದ (Accident) ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಉತ್ತರ ಪ್ರದೇಶದ ಕಾನ್ಪುರದಲ್ಲಿ (Kanpur) ಈ ಘಟನೆ ನಡೆದಿದ್ದು, ಅತಿ ವೇಗದಲ್ಲಿ ಬಂದ ಸ್ಕಾರ್ಪಿಯೋ ಎಸ್‌ಯುವಿ ಹೆದ್ದಾರಿಯ ಡಿವೈಡರ್‌ಗೆ ಡಿಕ್ಕಿ ಹೊಡೆದು, ಆಟಿಕೆ ಕಾರಿನಂತೆ ಹಾರಿ ಪಕ್ಕಕ್ಕೆ ಉರುಳಿದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಭಯಾನಕ ಅಪಘಾತದ ಘಟನೆ ನೆಟ್ಟಿಗರನ್ನು ಹಾಗೂ ಆ ವೇಳೆ ಅಲ್ಲಿ ಸಂಚರಿಸುತ್ತಿದ್ದ ವಾಹನ ಸವಾರರನ್ನು ಬೆಚ್ಚಿ ಬೀಳಿಸಿದೆ. ಕಾನ್ಪುರ್ ದೇಹತ್‌ನ ಅಕ್ಬರ್‌ಪುರ ಪೊಲೀಸ್ ಠಾಣೆ ಪ್ರದೇಶದ ಅಡಿಯಲ್ಲಿ ಬರುವ ಬಾರಾ ಟೋಲ್ ಪ್ಲಾಜಾವನ್ನು ದಾಟಿದ ಸ್ವಲ್ಪ ಸಮಯದ ನಂತರ ಅತಿ ವೇಗದ ಮಹೀಂದ್ರಾ ಸ್ಕಾರ್ಪಿಯೋ ಎಸ್‌ಯುವಿ ನಿಯಂತ್ರಣ ಕಳೆದುಕೊಂಡು ಹೆದ್ದಾರಿಯಲ್ಲಿರುವ ಡಿವೈಡರ್‌ಗೆ ಡಿಕ್ಕಿ ಹೊಡೆದಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಹೆದ್ದಾರಿಯಲ್ಲಿ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಈ ಭೀಕರ ಅಪಘಾತ ಸೆರೆಯಾಗಿದ್ದು, ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ