AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ: 8.5 ಲಕ್ಷದ ಬಳಿಕ ಈಗ ಶ್ರೀರಂಗಪಟ್ಟಣದಲ್ಲೂ 3.5 ಲಕ್ಷ ರೂ. ಜಪ್ತಿ

ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ: 8.5 ಲಕ್ಷದ ಬಳಿಕ ಈಗ ಶ್ರೀರಂಗಪಟ್ಟಣದಲ್ಲೂ 3.5 ಲಕ್ಷ ರೂ. ಜಪ್ತಿ

ದಿಲೀಪ್​, ಚೌಡಹಳ್ಳಿ
| Edited By: |

Updated on: Aug 28, 2026 | 7:42 PM

Share

ಮಂಡ್ಯ ಜಿಲ್ಲೆಯಲ್ಲಿ ಭಿಕ್ಷುಕರ ಮನೆಗಳಲ್ಲಿ ಲಕ್ಷಾಂತರ ರೂಪಾಯಿ ಹಣ ಪತ್ತೆಯಾಗುತ್ತಿರುವ ಎರಡು ಆಘಾತಕಾರಿ ಪ್ರಕರಣಗಳು ಬೆಳಕಿಗೆ ಬಂದಿವೆ. ಗುಟ್ಟಲಿನಲ್ಲಿ ಮೃತ ವೃದ್ಧ ಭಿಕ್ಷುಕಿಯ ಮನೆಯಲ್ಲಿ 8.5 ಲಕ್ಷ ರೂ. ಮತ್ತು ಶ್ರೀರಂಗಪಟ್ಟಣದಲ್ಲಿ ಅನಾರೋಗ್ಯ ಪೀಡಿತ ವೃದ್ಧೆಯ ಮನೆಯಲ್ಲಿ 3.5 ಲಕ್ಷ ರೂ. ಪತ್ತೆಯಾಗಿದೆ. ಇಂತಹ ಘಟನೆಗಳು ಭಿಕ್ಷುಕರ ಸುರಕ್ಷತೆ ಮತ್ತು ಅವರ ಹಣದ ರಕ್ಷಣೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿವೆ.

ಮಂಡ್ಯ, ಆ.28; ಜಿಲ್ಲೆಯಲ್ಲಿ ಭಿಕ್ಷುಕರ ಮನೆಗಳಲ್ಲಿ ಅಪಾರ ಪ್ರಮಾಣದ ನಗದು ಹಣ ಪತ್ತೆಯಾಗುತ್ತಿರುವ ಘಟನೆಗಳು ಸಾರ್ವಜನಿಕರಲ್ಲಿ ಆಶ್ಚರ್ಯ ಮೂಡಿಸಿವೆ. ಕೇವಲ ನಾಲ್ಕು ದಿನಗಳ ಹಿಂದೆಯಷ್ಟೇ ಮಂಡ್ಯದ ಗುಟ್ಟಲು ಗ್ರಾಮದಲ್ಲಿ ಮೃತಪಟ್ಟ ವೃದ್ಧ ಭಿಕ್ಷುಕಿಯ ಮನೆಯಲ್ಲಿ ಬರೋಬ್ಬರಿ 8.5 ಲಕ್ಷ ರೂಪಾಯಿ ನಗದು ಪತ್ತೆಯಾಗಿತ್ತು. ಆಕೆಯ ಸಂಬಂಧಿಕರು ಮನೆಗೆ ಭೇಟಿ ನೀಡಿದಾಗ ಈ ಸಂಗತಿ ಬೆಳಕಿಗೆ ಬಂದಿದೆ. ಇದೀಗ ಇದೇ ಮಾದರಿಯ ಮತ್ತೊಂದು ಪ್ರಕರಣ ಶ್ರೀರಂಗಪಟ್ಟಣದಲ್ಲಿ ವರದಿಯಾಗಿದೆ. ಅಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧ ಭಿಕ್ಷುಕಿಯ ಮನೆಯಲ್ಲಿ ಸುಮಾರು 3.5 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ. ಸ್ಥಳೀಯರು ಆಕೆಯ ಮನೆ ಸ್ವಚ್ಛಗೊಳಿಸುವ ಮತ್ತು ಚಿಕಿತ್ಸೆ ಕೊಡಿಸುವ ಪ್ರಯತ್ನದಲ್ಲಿದ್ದಾಗ ಈ ಹಣ ಸಿಕ್ಕಿದೆ. ಇಂತಹ ಪ್ರಕರಣಗಳು ನಿಜಕ್ಕೂ ಗಂಭೀರ ಸ್ವರೂಪ ಪಡೆದಿವೆ. ಭಿಕ್ಷುಕರನ್ನು ಕೇವಲ ನಿರ್ಲಕ್ಷ್ಯ ಮಾಡದೆ, ಅವರ ಸುರಕ್ಷತೆ ಮತ್ತು ಅವರ ಹಣದ ರಕ್ಷಣೆಗೆ ಸಂಬಂಧಪಟ್ಟ ಇಲಾಖೆಗಳು ಕ್ರಮ ಕೈಗೊಳ್ಳುವ ತುರ್ತು ಅಗತ್ಯವಿದೆ ಎಂದು ನಾಗರಿಕರು ಒತ್ತಾಯಿಸಿದ್ದಾರೆ. ಇಂತಹ ಘಟನೆಗಳು ಕಳ್ಳರ ಗಮನ ಸೆಳೆದು ಅವರ ಮೇಲೆ ಹಲ್ಲೆ ಅಥವಾ ಕಳ್ಳತನಕ್ಕೆ ಕಾರಣವಾಗಬಹುದು ಎಂಬ ಆತಂಕವೂ ವ್ಯಕ್ತವಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದಿಲೀಪ್​, ಚೌಡಹಳ್ಳಿ
ದಿಲೀಪ್​, ಚೌಡಹಳ್ಳಿ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸಿದ್ದೇನೆ. ಸಧ್ಯ ಮಂಡ್ಯ ಜಿಲ್ಲಾ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More