ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಘಟನೆ: ಮಹಿಳೆಯನ್ನು ಬಲವಂತವಾಗಿ ತಬ್ಬಿ ಚುಂಬಿಸಿದ ದುಷ್ಕರ್ಮಿ
ರಾಜ್ಯ ರಾಜಧಾನಿ ಬೆಂಗಳೂರಿನ ಮಹಿಳೆಯರು ಒಂಟಿಯಾಗಿ ಮನೆಯಿಂದ ಹೊರ ಬರುವಂತೆ ಇಲ್ಲವಾ? ಎಂಬ ಪ್ರಶ್ನೆ ಮೂಡಿದೆ. ಹೌದು, ಬೆಳಗ್ಗೆ 5 ಘಂಟೆ ಸಮಯದಲ್ಲಿ ನಡೆದ ಒಂದು ಘಟನೆ ನಿಜಕ್ಕೂ ಭಯ ಹುಟ್ಟಿಸುತ್ತಿದೆ. ವಾಕಿಂಗ್ ಎಂದು ರಸ್ತೆ ಬದಿ ನಿಂತಿದ್ದ ಮಹಿಳೆಯನ್ನ ವಿಕೃತ ಕಾಮಿಯೊಬ್ಬ ಬಲವಂತವಾಗಿ ತಬ್ಬಿ ಹಿಡಿದು ಚುಂಬಿಸಿದ್ದಾನೆ.
ಬೆಂಗಳೂರು, ಆ.04: ಸಿಲಿಕಾನ್ ಸಿಟಿ ಬೆಂಗಳೂರಿನ ಮಹಿಳೆಯರು ಒಂಟಿಯಾಗಿ ಮನೆಯಿಂದ ಹೊರ ಬರುವಂತೆ ಇಲ್ಲವಾ? ಎಂಬ ಪ್ರಶ್ನೆ ಮೂಡಿದೆ. ಹೌದು, ಬೆಳಗ್ಗೆ 5 ಘಂಟೆ ಸಮಯದಲ್ಲಿ ನಡೆದ ಒಂದು ಘಟನೆ ನಿಜಕ್ಕೂ ಭಯ ಹುಟ್ಟಿಸುತ್ತಿದೆ. ವಾಕಿಂಗ್ ಎಂದು ರಸ್ತೆ ಬದಿ ನಿಂತಿದ್ದ ಮಹಿಳೆಯನ್ನ ವಿಕೃತ ಕಾಮಿಯೊಬ್ಬ ಬಲವಂತವಾಗಿ ತಬ್ಬಿ ಹಿಡಿದು ಚುಂಬಿಸಿದ್ದಾನೆ. ನಂತರ ಆಕೆ ತಪ್ಪಿಸಿಕೊಂಡು ಬಂದರೂ ಸಹ ಹಿಂದೆ ಬಂದು ಹಿಂಸೆ ನೀಡಿದ್ದಾನೆ. ಈ ಘಟನೆ ಬೆಂಗಳೂರಿನ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆಗಸ್ಟ್ 02ರ ಬೆಳಗಿನ ಜಾವ ಐದು ಘಂಟೆಗೆ ಕೋಣನಕುಂಟೆ ಬಳಿಯ ಕೃಷ್ಣಾನಗರದಲ್ಲಿ ನಡೆದಿದೆ. ಘಟನೆ ಬಳಿಕ ಸ್ಥಳಕ್ಕೆ ಕೋಣನಕುಂಟೆ ಪೊಲೀಸರು ಭೇಟಿ ನೀಡಿದ್ದಾರೆ. ಆದರೆ, ಪೊಲೀಸರು ಸರಿಯಾದ ರೀತಿ ಕ್ರಮ ತೆಗೆದುಕೊಂಡಿಲ್ಲ ಎಂಬ ಆರೋಪ ಕೇಳಿಬಂದಿದೆ.
ಇದನ್ನೂ ಓದಿ: ವಾಕಿಂಗ್ಗೆ ಬಂದಿದ್ದ ಮಹಿಳೆಯನ್ನು ತಬ್ಬಿಕೊಂಡು ಚುಂಬಿಸಿ ಪರಾರಿಯಾಗಿದ್ದ ಕಾಮುಕ ಅರೆಸ್ಟ್
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Aug 04, 2024 10:20 PM