2 ಸಮುದಾಯಗಳ ನಡುವೆ ಭೂಪಾಲ್ನಲ್ಲಿ ಹಿಂಸಾತ್ಮಕ ಘರ್ಷಣೆ; 6 ಜನರಿಗೆ ಗಾಯ
ಭೂಪಾಲ್ನಲ್ಲಿ ಹಿಂಸಾತ್ಮಕ ಘರ್ಷಣೆಯೊಂದು ನಡೆದಿದ್ದು, ಈ ಘಟನೆಯಲ್ಲಿ 6 ಜನರು ಗಾಯಗೊಂಡಿದ್ದಾರೆ. ಎರಡು ಸಮುದಾಯಗಳ ನಡುವಿನ ಹಿಂಸಾತ್ಮಕ ಘರ್ಷಣೆಯಲ್ಲಿ ಕಲ್ಲು ತೂರಾಟ ಮತ್ತು ಕತ್ತಿಗಳನ್ನು ಹಿಡಿದುಕೊಂಡು ಹೊಡೆದಾಡುತ್ತಿರುವ ದೃಶ್ಯವನ್ನು ಮೊಬೈಲ್ನಲ್ಲಿ ಸೆರೆಹಿಡಿಯಲಾಗಿದೆ. ಎರಡೂ ಗುಂಪಿನವರು ಪರಸ್ಪರ ಕಲ್ಲು ತೂರಾಟ ನಡೆಸಿ, ತಮ್ಮ ಶಕ್ತಿ ಪ್ರದರ್ಶನಕ್ಕೆ ಕೈಯಲ್ಲಿ ಕತ್ತಿ ಹಿಡಿದು ಅಟ್ಟಿಸಿಕೊಂಡು ಹೋಗಿದ್ದಾರೆ.
ಭೂಪಾಲ್: ಭೂಪಾಲ್‌ನ ಜಹಂಗಿರಾಬಾದ್ ಪ್ರದೇಶದಲ್ಲಿ ವೇಗವಾಗಿ ಬೈಕ್ ಚಲಾಯಿಸಿದ ವಿಚಾರವಾಗಿ ಎರಡು ಸಮುದಾಯಗಳ ನಡುವೆ ಹಿಂಸಾತ್ಮಕ ಘರ್ಷಣೆ ಸಂಭವಿಸಿದೆ. ಈ ಘಟನೆಯಲ್ಲಿ 6 ಮಂದಿ ಗಾಯಗೊಂಡಿರುವ ಘಟನೆ ಇಂದು ನಡೆದಿದೆ. ಎರಡೂ ಗುಂಪಿನವರು ಪರಸ್ಪರ ಕಲ್ಲು ತೂರಾಟ ನಡೆಸಿ, ತಮ್ಮ ಶಕ್ತಿ ಪ್ರದರ್ಶನಕ್ಕೆ ಕೈಯಲ್ಲಿ ಕತ್ತಿ ಹಿಡಿದು ಅಟ್ಟಿಸಿಕೊಂಡು ಹೋಗಿದ್ದಾರೆ. ಇದೇ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಈ ಘರ್ಷಣೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು, ಶಾಂತಿ ಕಾಪಾಡಲು ಸ್ಥಳದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಮಾಡಿದ್ದಾರೆ. ಹಲವು ಹಿರಿಯ ಅಧಿಕಾರಿಗಳು ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ. ಎರಡು ದಿನಗಳ ಹಿಂದೆ ದ್ವಿಚಕ್ರವಾಹನವನ್ನು ವೇಗವಾಗಿ ಚಲಾಯಿಸಿದ ವಿಚಾರವಾಗಿ ಕೆಲವು ಯುವಕರ ನಡುವೆ ನಡೆದ ಗಲಾಟೆಯಿಂದ ಸಂಘರ್ಷ ಉಂಟಾಗಿದೆ. ಗಲಾಟೆಯಲ್ಲಿ ಐವರು ಆರೋಪಿಗಳ ಪೈಕಿ ಮೂವರನ್ನು ಬಂಧಿಸಲಾಗಿದ್ದು, ಇನ್ನಿಬ್ಬರು ತಲೆಮರೆಸಿಕೊಂಡಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ