ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!

Updated on: Nov 21, 2024 | 9:08 PM

ಕೇರಳದಲ್ಲಿ ಎಸ್​ಯುವಿ ಕಾರೊಂದು ಎದುರಿನಿಂದ ವೇಗವಾಗಿ ಬಂದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದ ಕಾರಣದಿಂದ ಆ ಬಸ್​ನ ಹಿಂಬದಿಯ ಆಕ್ಸಲ್ ಬೇರ್ಪಟ್ಟಿದೆ. ಈ ಶಾಕಿಂಗ್ ವಿಡಿಯೋ ವೈರಲ್ ಆಗಿದೆ. ಅಪಘಾತದಲ್ಲಿ ಬಸ್‌ನ ಮುಂಭಾಗ ಮತ್ತು ಬಲಭಾಗ ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಬಸ್ ಅಪಘಾತದ ಸಿಸಿಟಿವಿ ದೃಶ್ಯಾವಳಿಗಳು ದಾಖಲಾಗಿವೆ.

ಕೊಟ್ಟಾರಕ್ಕರ: ಎಸ್‌ಯುವಿ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ವೇಗವಾಗಿ ಬಂದ ಎಸ್‌ಯುವಿ ಸಾರಿಗೆ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್‌ನ ಹಿಂಬದಿಯ ಆಕ್ಸಲ್ ಛಿದ್ರವಾಗಿರುವ ಘಟನೆ ಕೊಲ್ಲಂ ಜಿಲ್ಲೆಯ ಕೊಟ್ಟಾರಕ್ಕರದಲ್ಲಿ ನಡೆದಿದೆ. ಬೆಳ್ಳಂಬೆಳಗ್ಗೆ ನಡೆದ ಈ ನಾಟಕೀಯ ಘಟನೆ ಸಮೀಪದ ಅಂಗಡಿಯೊಂದರ ಸಿಸಿಟಿವಿ ದೃಶ್ಯಾವಳಿಯಲ್ಲಿ ದಾಖಲಾಗಿದೆ. ಅಪಘಾತದಲ್ಲಿ ಬಸ್‌ನ ಮುಂಭಾಗ ಮತ್ತು ಬಲಭಾಗ ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Nov 21, 2024 09:07 PM
Loading...
Unable to load recommendations.
Follow Us
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More