Shiradi Ghat: ಮತ್ತೆ ಮತ್ತೆ ಕುಸಿಯುತ್ತಲೇ ಇದೆ ಶಿರಾಡಿ ಘಾಟ್; ಕೆಸರಿನ ರಾಶಿ ಹರಿದುಬರುತ್ತಿರುವ ವಿಡಿಯೋ ಇಲ್ಲಿದೆ

Updated on: Aug 02, 2024 | 5:14 PM

ಹಾಸನ- ದಕ್ಷಿಣ ಕನ್ನಡವನ್ನು ಸಂಪರ್ಕಿಸುವ ಶಿರಾಡಿ ಘಾಟ್ 2-3 ದಿನಗಳಿಂದ ನಿರಂತರವಾಗಿ ಕುಸಿಯುತ್ತಲೇ ಇದೆ. ಈಗಾಗಲೇ 6 ಬಾರಿ ಕುಸಿದಿರುವ ಶಿರಾಡಿ ಘಾಟ್​ನಲ್ಲಿ ಮಣ್ಣು ತೆಗೆದಷ್ಟೂ ಮತ್ತೆ ಮತ್ತೆ ಗುಡ್ಡ ಕುಸಿಯುತ್ತಲೇ ಇದೆ. ಅದರ ವಿಡಿಯೋ ಇಲ್ಲಿದೆ.

ಸಕಲೇಶಪುರದಿಂದ ಮಂಗಳೂರಿಗೆ ಬರುವ ಮಾರ್ಗದಲ್ಲಿ ಸಿಗುವ ಶಿರಾಡಿ ಘಾಟ್​ ಈ ಬಾರಿ ಭಾರೀ ಭೂಕುಸಿತಕ್ಕೊಳಗಾಗಿದೆ. ರಾಷ್ಟ್ರೀಯ ಹೆದ್ದಾರಿ 75 ದೊಡ್ಡತಪ್ಪಲೆ ಸಮೀಪ ಮತ್ತೆ ಭೂಕುಸಿತ ಉಂಟಾಗಿದೆ. ಶಿರಾಡಿ ಘಾಟ್​ನ ರಸ್ತೆಯ ಮೇಲೆ ಕೆಸರಿನ ನೀರು ಹರಿದುಬರುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ಮಾರ್ಗದಲ್ಲಿ ಸಂಚರಿಸಲು ಪ್ರಯಾಣಿಕರು ಭಯಪಡುವಂತಹ ಸ್ಥಿತಿ ನಿರ್ಮಾಣವಾಗಿದೆ.

ಮಂಗಳವಾರ ಸಂಜೆಯಿಂದ ಗುಡ್ಡ ಕುಸಿತವಾಗುತ್ತಿರುವುದರಿಂದ ತಾತ್ಕಾಲಿಕವಾಗಿ ಶಿರಾಡಿ ಘಾಟ್ ಅನ್ನು ಬಂದ್ ಮಾಡಲಾಗಿತ್ತು. ಆದರೆ, ನಂತರ ಮಣ್ಣು ತೆಗೆದು ಸಂಚಾರಕ್ಕೆ ಮುಕ್ತಗೊಳಿಸಲಾಗಿತ್ತು. ಆದರೂ ಈ ಭಾಗದಲ್ಲಿ ಅಲ್ಲಲ್ಲಿ ಮಣ್ಣು ಕುಸಿತವಾಗುತ್ತಿರುವುದು ಮುಂದುವರೆದಿದೆ.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Aug 02, 2024 04:59 PM
Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More