ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು 10 ಅಡಿ ಮೇಲೆ ಹಾರಿದ ಕುದುರೆ ಗಾಡಿ; ಶಾಕಿಂಗ್ ವಿಡಿಯೋ ವೈರಲ್

|

Updated on: Dec 09, 2024 | 3:53 PM

ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಕುದುರೆ ಟಾಂಗಾಕ್ಕೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ದೆಹಲಿ-ಸಹಾರನ್‌ಪುರ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಈ ಅಪಘಾತದಲ್ಲಿ ಕುದುರೆಯು ಮೇಲಕ್ಕೆ ಹಾರಿ ಕೆಳಗೆ ಬಿದ್ದಿದೆ. ಹೆದ್ದಾರಿಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಕಾರು ಕುದುರೆ ಗಾಡಿಗೆ ಡಿಕ್ಕಿ ಹೊಡೆದು ದುರಂತ ಸಂಭವಿಸಿದ ಕ್ಷಣ ದಾಖಲಾಗಿದೆ.

ನೊಯ್ಡಾ: ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ವೇಗವಾಗಿ ಬಂದ ಕಾರು ಕುದುರೆ ಗಾಡಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಕುದುರೆ ಸಮೇತ ಆ ಗಾಡಿ 10 ಅಡಿ ಮೇಲಕ್ಕೆ ಹಾರಿ ಬಿದ್ದಿದೆ. ಈ ಘಟನೆಯಲ್ಲಿ ಕುದುರೆ ಸಾವನ್ನಪ್ಪಿದ್ದು, ಇನ್ನೂ 5 ಜನರಿಗೆ ಗಂಭೀರವಾದ ಗಾಯಗಳಾಗಿವೆ. ಈ ಘಟನೆಯ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದೆಹಲಿ-ಸಹಾರನ್‌ಪುರ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ