ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ಶಾಕಿಂಗ್ ವಿಡಿಯೋ ಇಲ್ಲಿದೆ
ಈ ವಿಡಿಯೋವನ್ನು ನೋಡಿದರೆ ಬೀದಿ ಹಸು ಮೊದಲು ಮಗುವಿನ ಮೇಲೆ ದಾಳಿ ಮಾಡಲು ಪ್ರಯತ್ನಿಸಿತು. ಆಗ ತಾಯಿ ತನ್ನ ಮಗುವನ್ನು ರಕ್ಷಿಸಲು ಪ್ರಯತ್ನಿಸಿದರು. ಆಗ ಹಸು ಆಕೆಯ ಮೇಲೆ ದಾಳಿ ಮಾಡಿತು. ಈ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆಗಿದೆ. ತಕ್ಷಣ ನೆರೆಹೊರೆಯವರು ಆಕೆಯ ರಕ್ಷಣೆಗೆ ಬಂದು ಹಸುವನ್ನು ಓಡಿಸುವಲ್ಲಿ ಯಶಸ್ವಿಯಾದರು. ಗಾಯಗೊಂಡಿದ್ದ ಆಕೆಯನ್ನು ಚಿಕಿತ್ಸೆಗಾಗಿ ಆಂಬ್ಯುಲೆನ್ಸ್‌ನಲ್ಲಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಚೆನ್ನೈ, (ಮಾರ್ಚ್ 15): ತಮಿಳುನಾಡಿನ ಕೊಳತ್ತೂರಿನ ಬಾಲಾಜಿ ನಗರದಲ್ಲಿ ಬೀದಿ ಹಸು ಮಹಿಳೆ ಮತ್ತು ಆಕೆಯ ಮಗುವಿನ ಮೇಲೆ ದಾಳಿ ಮಾಡುತ್ತಿರುವ ಆಘಾತಕಾರಿ ವಿಡಿಯೋ ವೈರಲ್ ಆಗಿದ್ದು, ಚೆನ್ನೈನಲ್ಲಿ ಹೆಚ್ಚುತ್ತಿರುವ ಬೀದಿ ಪ್ರಾಣಿಗಳ ಸಮಸ್ಯೆಯ ಬಗ್ಗೆ ಮತ್ತೆ ಕಳವಳ ವ್ಯಕ್ತವಾಗಿದೆ. ಈ ವಿಡಿಯೋವನ್ನು ನೋಡಿದರೆ ಬೀದಿ ಹಸು ಮೊದಲು ಮಗುವಿನ ಮೇಲೆ ದಾಳಿ ಮಾಡಲು ಪ್ರಯತ್ನಿಸಿತು. ಆಗ ತಾಯಿ ತನ್ನ ಮಗುವನ್ನು ರಕ್ಷಿಸಲು ಪ್ರಯತ್ನಿಸಿದರು. ಆಗ ಹಸು ಆಕೆಯ ಮೇಲೆ ದಾಳಿ ಮಾಡಿತು. ಈ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆಗಿದೆ. ತಕ್ಷಣ ನೆರೆಹೊರೆಯವರು ಆಕೆಯ ರಕ್ಷಣೆಗೆ ಬಂದು ಹಸುವನ್ನು ಓಡಿಸುವಲ್ಲಿ ಯಶಸ್ವಿಯಾದರು. ಗಾಯಗೊಂಡಿದ್ದ ಆಕೆಯನ್ನು ಚಿಕಿತ್ಸೆಗಾಗಿ ಆಂಬ್ಯುಲೆನ್ಸ್‌ನಲ್ಲಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ