ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ಶಾಕಿಂಗ್ ವಿಡಿಯೋ ಇಲ್ಲಿದೆ

Updated on: Mar 15, 2025 | 7:46 PM

ಈ ವಿಡಿಯೋವನ್ನು ನೋಡಿದರೆ ಬೀದಿ ಹಸು ಮೊದಲು ಮಗುವಿನ ಮೇಲೆ ದಾಳಿ ಮಾಡಲು ಪ್ರಯತ್ನಿಸಿತು. ಆಗ ತಾಯಿ ತನ್ನ ಮಗುವನ್ನು ರಕ್ಷಿಸಲು ಪ್ರಯತ್ನಿಸಿದರು. ಆಗ ಹಸು ಆಕೆಯ ಮೇಲೆ ದಾಳಿ ಮಾಡಿತು. ಈ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆಗಿದೆ. ತಕ್ಷಣ ನೆರೆಹೊರೆಯವರು ಆಕೆಯ ರಕ್ಷಣೆಗೆ ಬಂದು ಹಸುವನ್ನು ಓಡಿಸುವಲ್ಲಿ ಯಶಸ್ವಿಯಾದರು. ಗಾಯಗೊಂಡಿದ್ದ ಆಕೆಯನ್ನು ಚಿಕಿತ್ಸೆಗಾಗಿ ಆಂಬ್ಯುಲೆನ್ಸ್‌ನಲ್ಲಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಚೆನ್ನೈ, (ಮಾರ್ಚ್ 15): ತಮಿಳುನಾಡಿನ ಕೊಳತ್ತೂರಿನ ಬಾಲಾಜಿ ನಗರದಲ್ಲಿ ಬೀದಿ ಹಸು ಮಹಿಳೆ ಮತ್ತು ಆಕೆಯ ಮಗುವಿನ ಮೇಲೆ ದಾಳಿ ಮಾಡುತ್ತಿರುವ ಆಘಾತಕಾರಿ ವಿಡಿಯೋ ವೈರಲ್ ಆಗಿದ್ದು, ಚೆನ್ನೈನಲ್ಲಿ ಹೆಚ್ಚುತ್ತಿರುವ ಬೀದಿ ಪ್ರಾಣಿಗಳ ಸಮಸ್ಯೆಯ ಬಗ್ಗೆ ಮತ್ತೆ ಕಳವಳ ವ್ಯಕ್ತವಾಗಿದೆ. ಈ ವಿಡಿಯೋವನ್ನು ನೋಡಿದರೆ ಬೀದಿ ಹಸು ಮೊದಲು ಮಗುವಿನ ಮೇಲೆ ದಾಳಿ ಮಾಡಲು ಪ್ರಯತ್ನಿಸಿತು. ಆಗ ತಾಯಿ ತನ್ನ ಮಗುವನ್ನು ರಕ್ಷಿಸಲು ಪ್ರಯತ್ನಿಸಿದರು. ಆಗ ಹಸು ಆಕೆಯ ಮೇಲೆ ದಾಳಿ ಮಾಡಿತು. ಈ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಡಿಯೋ ವೈರಲ್ ಆಗಿದೆ. ತಕ್ಷಣ ನೆರೆಹೊರೆಯವರು ಆಕೆಯ ರಕ್ಷಣೆಗೆ ಬಂದು ಹಸುವನ್ನು ಓಡಿಸುವಲ್ಲಿ ಯಶಸ್ವಿಯಾದರು. ಗಾಯಗೊಂಡಿದ್ದ ಆಕೆಯನ್ನು ಚಿಕಿತ್ಸೆಗಾಗಿ ಆಂಬ್ಯುಲೆನ್ಸ್‌ನಲ್ಲಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More