ಚಿನ್ನ ಖರೀದಿಗೆ ಬಂದು ಆಭರಣದ ಬಾಕ್ಸನ್ನೇ ಎತ್ತಿಕೊಂಡು ಓಡಿಹೋದ ಮಹಿಳೆ!
ಆಕೆ ಆಭರಣಗಳನ್ನು ವೀಕ್ಷಿಸುವ ನೆಪದಲ್ಲಿ ಅಂಗಡಿಯ ಸಿಬ್ಬಂದಿಯೊಂದಿಗೆ ನಿರಂತರವಾಗಿ ಮಾತನಾಡಿ ಅವರ ಗಮನವನ್ನು ಬೇರೆಡೆಗೆ ಸೆಳೆದಿದ್ದಾಳೆ. ಸರಿಯಾದ ಸಮಯಕ್ಕಾಗಿ ಕಾಯುತ್ತಿದ್ದ ಮಹಿಳೆ, ಸಿಬ್ಬಂದಿಯ ಕಣ್ಣು ತಪ್ಪಿಸಿ ಲಕ್ಷಾಂತರ ಮೌಲ್ಯದ ಚಿನ್ನದ ಒಡವೆಗಳಿದ್ದ ಇಡೀ ಪೆಟ್ಟಿಗೆಯನ್ನು ಎಗರಿಸಿ ಸ್ಥಳದಿಂದ ಪರಾರಿಯಾಗಿದ್ದಾಳೆ. ಈ ಘಟನೆಯ ಸಂಪೂರ್ಣ ದೃಶ್ಯಾವಳಿಗಳು ಅಂಗಡಿಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ.
ಜೈಪುರ, ಸೆಪ್ಟೆಂಬರ್ 5: ಗ್ರಾಹಕಳಂತೆ ನಟಿಸಿ ಜ್ಯುವೆಲ್ಲರಿ ಅಂಗಡಿಗೆ ಬಂದ ಮಹಿಳೆಯೊಬ್ಬಳು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳಿದ್ದ ಪೆಟ್ಟಿಗೆ ಎತ್ತಿಕೊಂಡು ಪರಾರಿಯಾಗಿರುವ ಆಘಾತಕಾರಿ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಈ ಇಡೀ ಭೀಕರ ಕಳ್ಳತನದ ದೃಶ್ಯವು ಅಂಗಡಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಆಕೆ ಆಭರಣಗಳನ್ನು ವೀಕ್ಷಿಸುವ ನೆಪದಲ್ಲಿ ಅಂಗಡಿಯ ಸಿಬ್ಬಂದಿಯೊಂದಿಗೆ ನಿರಂತರವಾಗಿ ಮಾತನಾಡಿ ಅವರ ಗಮನವನ್ನು ಬೇರೆಡೆಗೆ ಸೆಳೆದಿದ್ದಾಳೆ. ಸರಿಯಾದ ಸಮಯಕ್ಕಾಗಿ ಕಾಯುತ್ತಿದ್ದ ಮಹಿಳೆ, ಸಿಬ್ಬಂದಿಯ ಕಣ್ಣು ತಪ್ಪಿಸಿ ಲಕ್ಷಾಂತರ ಮೌಲ್ಯದ ಚಿನ್ನದ ಒಡವೆಗಳಿದ್ದ ಇಡೀ ಪೆಟ್ಟಿಗೆಯನ್ನು ಎಗರಿಸಿ ಸ್ಥಳದಿಂದ ಪರಾರಿಯಾಗಿದ್ದಾಳೆ. ಈ ಘಟನೆಯ ಸಂಪೂರ್ಣ ದೃಶ್ಯಾವಳಿಗಳು ಅಂಗಡಿಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ