Shocking Video: ಬೈಕ್​ನಲ್ಲಿ ಹೋಗುತ್ತಿದ್ದ ಯುವತಿಗೆ ರಸ್ತೆಯಲ್ಲಿ ನಿಂತ ಮಳೆನೀರು ಎರಚಿ ಪುರುಷರಿಂದ ಕಿರುಕುಳ; ವಿಡಿಯೋ ವೈರಲ್

Updated on: Jul 31, 2024 | 7:05 PM

ಲಕ್ನೋದ ಸೇತುವೆಯ ಕೆಳಗೆ ನಿಂತಿದ್ದ ಮಳೆನೀರಿನಲ್ಲಿ ಆಟವಾಡುತ್ತಿದ್ದ ಪುರುಷರು ಬೈಕ್​ನಲ್ಲಿ ಹಿಂದೆ ಕುಳಿತಿದ್ದ ಯುವತಿಗೆ ರಸ್ತೆಯಲ್ಲಿ ನಿಂತ ಮಳೆನೀರು ಎರಚಿ ಕಿರುಕುಳ ನೀಡಿದ್ದಾರೆ. ಈ ಘಟನೆಯ ವಿಡಿಯೋ ವೈರಲ್ ಆಗಿದ್ದು, ಹಗಲು ಹೊತ್ತಿನಲ್ಲಿಯೇ ಮಹಿಳೆಯೊಬ್ಬರಿಗೆ ಈ ರೀತಿ ನಡುರಸ್ತೆಯಲ್ಲಿ ಕಿರುಕುಳ ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಉತ್ತರ ಪ್ರದೇಶದ ಲಕ್ನೋದ ತಾಜ್ ಹೋಟೆಲ್ ಸೇತುವೆಯ ಕೆಳಗೆ ಮೊಣಕಾಲು ಆಳದ ನೀರಿನಲ್ಲಿ ಮಳೆಯ ನೀರಿನಲ್ಲಿ ಎಂಜಾಯ್ ಮಾಡುತ್ತಿದ್ದ ಪುರುಷರ ಗುಂಪೊಂದು ಅದೇ ಮಾರ್ಗದಲ್ಲಿ ಬಂದ ಬೈಕ್​ನಲ್ಲಿ ಕುಳಿತಿದ್ದ ಪುರುಷ ಮತ್ತು ಯುವತಿಗೆ ಆ ಮಳೆನೀರನ್ನು ಎರಚಿ ಕಿರುಕುಳ ನೀಡಿದ್ದಾರೆ. ಆ ಇಬ್ಬರ ಮೈ ಪೂರ್ತಿ ಒದ್ದೆಯಾಗಿ ಅವರು ತಮ್ಮನ್ನು ಬಿಡುವಂತೆ ಮನವಿ ಮಾಡಿದರೂ ಬಿಡದೆ ಕಿಚಾಯಿಸಿದ್ದಾರೆ. ಇನ್ನೂ ವಿಪರ್ಯಾಸವೆಂದರೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರ ಮನೆಯ ಸಮೀಪದಲ್ಲೇ ಈ ಘಟನೆ ನಡೆದಿದೆ.

ಬೈಕ್​ನಲ್ಲಿ ಬಂದ ಇಬ್ಬರ ಮೇಲೆ ಮಳೆ ನೀರು ಎರಚಿದ ಪುರುಷರು ಆ ಬೈಕ್ ಅನ್ನು ಹಿಂಬದಿಯಿಂದ ಎಳೆಯಲು ಆರಂಭಿಸಿದರು. ಇದರಿಂದ ಆ ವ್ಯಕ್ತಿ ಬೈಕ್ ನಿಲ್ಲಿಸಿ ಕೀ ತೆಗೆಯುತ್ತಿದ್ದಂತೆ ಬ್ಯಾಲೆನ್ಸ್ ತಪ್ಪಿ ಹಿಂದೆ ಕುಳಿತಿದ್ದ ಯುವತಿ ನೀರಿಗೆ ಬಿದ್ದಿದ್ದಾಳೆ. ಈ ವಿಡಿಯೋಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More