ಉತ್ತರ ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿ ರಾದ್ಧಾಂತ; ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್

Updated on: Oct 11, 2026 | 10:53 PM

ಉತ್ತರ ಪ್ರದೇಶದ ಕಾಂಗ್ರೆಸ್ ರಾಜ್ಯ ಸಮಿತಿಯ ಕೇಂದ್ರ ಕಚೇರಿಯಲ್ಲಿ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಹಾಗೂ ಪಕ್ಷದ ನಾಯಕಿ ಮಮತಾ ಚೌಧರಿ ಅವರ ಬೆಂಬಲಿಗರ ನಡುವೆ ತೀವ್ರ ಘರ್ಷಣೆ ಸಂಭವಿಸಿದ್ದು, ಕಚೇರಿ ಆವರಣದಲ್ಲೇ ಬೆಂಬಲಿಗರು ಪರಸ್ಪರ ಶೂ ಎಸೆದಾಡಿಕೊಂಡ ಘಟನೆ ವರದಿಯಾಗಿದೆ. ಲಕ್ನೋದಲ್ಲಿರುವ ಪಕ್ಷದ ರಾಜ್ಯ ಕಚೇರಿಯಲ್ಲಿ ಪ್ರಮುಖ ಸಭೆ ಅಥವಾ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ಅಜಯ್ ರೈ ಮತ್ತು ಮಮತಾ ಚೌಧರಿ ಅವರ ಬೆಂಬಲಿಗರ ನಡುವೆ ಮಾತಿನ ಚಕಮಕಿ ಆರಂಭವಾಗಿತ್ತು.

ಲಕ್ನೋ, ಅಕ್ಟೋಬರ್ 11: ಉತ್ತರ ಪ್ರದೇಶದ ಕಾಂಗ್ರೆಸ್ ರಾಜ್ಯ ಸಮಿತಿಯ ಕೇಂದ್ರ ಕಚೇರಿಯಲ್ಲಿ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಹಾಗೂ ಪಕ್ಷದ ನಾಯಕಿ ಮಮತಾ ಚೌಧರಿ ಅವರ ಬೆಂಬಲಿಗರ ನಡುವೆ ತೀವ್ರ ಘರ್ಷಣೆ ಸಂಭವಿಸಿದ್ದು, ಕಚೇರಿ ಆವರಣದಲ್ಲೇ ಬೆಂಬಲಿಗರು ಪರಸ್ಪರ ಶೂ ಎಸೆದಾಡಿಕೊಂಡ ಘಟನೆ ವರದಿಯಾಗಿದೆ. ಲಕ್ನೋದಲ್ಲಿರುವ ಪಕ್ಷದ ರಾಜ್ಯ ಕಚೇರಿಯಲ್ಲಿ ಪ್ರಮುಖ ಸಭೆ ನಡೆಯುತ್ತಿದ್ದ ವೇಳೆ ಅಜಯ್ ರೈ ಮತ್ತು ಮಮತಾ ಚೌಧರಿ ಅವರ ಬೆಂಬಲಿಗರ ನಡುವೆ ಮಾತಿನ ಚಕಮಕಿ ಆರಂಭವಾಗಿತ್ತು. ನಾಯಕರ ಪರ-ವಿರೋಧ ಘೋಷಣೆಗಳೊಂದಿಗೆ ತೀವ್ರಗೊಂಡ ಈ ಜಗಳ, ಕ್ಷಣಾರ್ಧದಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತು. ಘರ್ಷಣೆ ವಿಕೋಪಕ್ಕೆ ತಿರುಗುತ್ತಿದ್ದಂತೆ ಕಚೇರಿಯಲ್ಲಿದ್ದ ಕುರ್ಚಿಗಳನ್ನು ಹಾಗೂ ಶೂಗಳನ್ನು ಪರಸ್ಪರರ ಮೇಲೆ ಎಸೆಯಲಾಯಿತು. ಈ ಘಟನೆಯಲ್ಲಿ ಹಲವು ಕಾರ್ಯಕರ್ತರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕಚೇರಿಯಲ್ಲಿದ್ದ ಪೀಠೋಪಕರಣಗಳಿಗೆ ಹಾನಿಯಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More