World Cup 2025: ವೇಗದ ಅರ್ಧಶತಕ, ವಿಶ್ವಕಪ್ನಲ್ಲಿ ಇತಿಹಾಸ ಸೃಷ್ಟಿಸಿದ 18 ವರ್ಷದ ಬಾಂಗ್ಲಾ ಬ್ಯಾಟರ್
Shorna Akter's Record Fifty: ಐಸಿಸಿ ಮಹಿಳಾ ಏಕದಿನ ವಿಶ್ವಕಪ್ 2025 ರಲ್ಲಿ ಬಾಂಗ್ಲಾದೇಶದ 18 ವರ್ಷದ ಆಲ್ ರೌಂಡರ್ ಶೋರ್ನಾ ಅಕ್ತರ್ ದಕ್ಷಿಣ ಆಫ್ರಿಕಾ ವಿರುದ್ಧ ಕೇವಲ 34 ಎಸೆತಗಳಲ್ಲಿ ವೇಗದ ಅರ್ಧಶತಕ ಬಾರಿಸಿ ಇತಿಹಾಸ ಸೃಷ್ಟಿಸಿದ್ದಾರೆ. ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ಬಾಂಗ್ಲಾದೇಶದ ಪರ ಈ ಸಾಧನೆ ಮಾಡಿದ ಮೊದಲ ಆಟಗಾರ್ತಿಯಾಗಿ ಹೊರಹೊಮ್ಮಿದ್ದಾರೆ. 2023 ರಲ್ಲಿ 16ನೇ ವಯಸ್ಸಿನಲ್ಲಿ ಟಿ20 ಪಂದ್ಯದಲ್ಲಿ ಐದು ವಿಕೆಟ್ ಪಡೆದು ಗಮನ ಸೆಳೆದಿದ್ದ ಶೋರ್ನಾ, ಈಗ ಮತ್ತೆ ಮಿಂಚಿದ್ದಾರೆ.
ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯುತ್ತಿರುವ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ 2025 ರಲ್ಲಿ ಬಾಂಗ್ಲಾದೇಶ ಕ್ರಿಕೆಟ್ ತಂಡದ 18 ವರ್ಷದ ಆಲ್ ರೌಂಡರ್ ಶೋರ್ನಾ ಅಕ್ತರ್ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಬಾಂಗ್ಲಾದೇಶ ಪರ ವೇಗದ ಅರ್ಧಶತಕ ಬಾರಿಸಿದ ದಾಖಲೆ ಸೃಷ್ಟಿಸಿದ್ದಾರೆ. ಬಾಂಗ್ಲಾದೇಶ ಪರ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶೋರ್ನಾ ಕೇವಲ 34 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು.
41 ನೇ ಓವರ್‌ನಲ್ಲಿ ಕ್ರೀಸ್‌ಗೆ ಬಂದ ಶೋರ್ನಾ ಕೇವಲ 34 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಈ ಮೂಲಕ ಬಾಂಗ್ಲಾದೇಶದ ಪರ ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ ವೇಗದ ಅರ್ಧಶತಕ ಬಾರಿಸಿದ ದಾಖಲೆ ಸೃಷ್ಟಿಸಿದರು. ಅಂತಿಮವಾಗಿ ಶೋರ್ನಾ ಕೇವಲ 35 ಎಸೆತಗಳಲ್ಲಿ ಮೂರು ಬೌಂಡರಿ ಮತ್ತು ಮೂರು ಸಿಕ್ಸರ್‌ಗಳನ್ನು ಒಳಗೊಂಡಂತೆ 51 ರನ್ ಗಳಿಸಿದರು. ಇದಲ್ಲದೆ, ಅವರು ಏಕದಿನ ಪಂದ್ಯದಲ್ಲಿ ಮೂರು ಸಿಕ್ಸರ್‌ಗಳನ್ನು ಬಾರಿಸಿದ ಮೊದಲ ಬಾಂಗ್ಲಾದೇಶದ ಮಹಿಳಾ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.
ಶೋರ್ನಾ ಅಖ್ತರ್ ಉತ್ತಮ ಪ್ರದರ್ಶನ ನೀಡುತ್ತಿರುವುದು ಇದೇ ಮೊದಲಲ್ಲ. 2023 ರ ಆರಂಭದಲ್ಲಿ, ಕೇವಲ 16 ವರ್ಷ ವಯಸ್ಸಿನಲ್ಲಿ, ಶೋರ್ನಾ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಪಂದ್ಯದಲ್ಲಿ ಐದು ವಿಕೆಟ್‌ಗಳನ್ನು ಪಡೆಯುವ ಮೂಲಕ ಇತಿಹಾಸ ನಿರ್ಮಿಸಿದ್ದರು. ಈ ಮೂಲಕ ಐಸಿಸಿ ಪೂರ್ಣ ಸದಸ್ಯ ತಂಡದ ನಡುವಿನ ಟಿ20 ಪಂದ್ಯದಲ್ಲಿ ಐದು ವಿಕೆಟ್‌ಗಳನ್ನು ಪಡೆದ ಮೊದಲ 16 ವರ್ಷದ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ