ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಣಾಪೂರ ಗ್ರಾಮದ ರೆಸಾರ್ಟ್ ಸಮೀಪ ಸುಮಾರು 10 ಅಡಿ ಉದ್ದದ ಬೃಹತ್ ಹೆಬ್ಬಾವು ಕಾಣಿಸಿಕೊಂಡು ಸ್ಥಳೀಯರಲ್ಲಿ ಅಚ್ಚರಿ ಮೂಡಿಸಿತು. ಸ್ಥಳೀಯ ಯುವಕರು ಹೆಬ್ಬಾವನ್ನು ಸುರಕ್ಷಿತವಾಗಿ ರಕ್ಷಿಸಿ, ಬಳಿಕ ವಿರುಪಾಪುರ ಗಡ್ಡೆ ಅರಣ್ಯ ಪ್ರದೇಶದಲ್ಲಿ ಯಾವುದೇ ತೊಂದರೆಯಾಗದಂತೆ ಬಿಟ್ಟಿದ್ದಾರೆ.