ಮೈಸೂರು ಜಿಲ್ಲೆಯ ಹೆಚ್. ಡಿ. ಕೋಟೆ ತಾಲೂಕಿನ ಮೇಟಿಕುಪ್ಪೆ ಮುಖ್ಯ ರಸ್ತೆಯಲ್ಲಿರುವ ಬಸವನಗಿರಿ ಆಶ್ರಮ ಶಾಲೆಯ ಪ್ರದೇಶದಲ್ಲಿ ಕಾಣಿಸಿಕೊಂಡಿದ್ದ ಭಾರಿ ಗಾತ್ರದ ಹೆಬ್ಬಾವನ್ನು ಸೆರೆಹಿಡಿಯಲಾಗಿದೆ. ಸುಮಾರು 15 ಅಡಿ ಉದ್ದದ ಹೆಬ್ಬಾವು ಕಂಡು ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಆತಂಕಗೊಂಡಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಅಧಿಕಾರಿಗಳು, ಗ್ರಾಮಸ್ಥರ ಸಹಾಯದಿಂದ ಹೆಬ್ಬಾವನ್ನು ಸೆರೆ ಹಿಡಿದಿದ್ದಾರೆ.