ಸಾಲು ಸಾಲು ರಜೆ ಮುಗಿಸಿ ಬೆಂಗಳೂರಿನತ್ತ ಜನ ವಾಪಾಸಾಗುತ್ತಿರುವ ಹಿನ್ನೆಲೆ ನೆಲಮಂಗಲ ಕುಣಿಗಲ್ ರಸ್ತೆಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು 4 ಕಿಲೋಮೀಟರ್ ದೂರದ ವರೆಗೂ ವಾಹನಗಳು ಸಾಲು ನಿಂತಿದ್ದು, ವಾಹನ ಸವಾರರು ಪರದಾಟ ನಡೆಸಿದ್ದಾರೆ. ಟ್ರಾಫಿಕ್ ನಿಯಂತ್ರಿಸಲು ನೆಲಮಂಗಲ ಸಂಚಾರಿ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.