ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಚೆನ್ನಮಲ್ಲಿಪುರ ಬಳಿ ರೈತರ ಜಮೀನಿನಲ್ಲಿ ಆತಂಕ ಸೃಷ್ಟಿಸಿದ್ದ 8 ವರ್ಷದ ಹೆಣ್ಣು ಹುಲಿಯನ್ನು ಯಶಸ್ವಿಯಾಗಿ ಸೆರೆ ಹಿಡಿಯಲಾಗಿದೆ. ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಸಿಬ್ಬಂದಿ ಡ್ರೋನ್ ಕ್ಯಾಮರಾ ಮತ್ತು ಸಾಕಾನೆಗಳಾದ ಭೀಮಾ, ಮಹೇಂದ್ರ ಬಳಸಿ ಅರಿವಳಿಕೆ ಚುಚ್ಚುಮದ್ದು ನೀಡಿ ಹುಲಿಯನ್ನು ಹಿಡಿದಿದ್ದಾರೆ. ಸೆರೆ ಸಿಕ್ಕ ಹುಲಿಯನ್ನು ಮೈಸೂರಿನ ಕೂರ್ಗಳ್ಳಿ ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.