ದೇವರ ದರ್ಶನಕ್ಕೆ ಹೊರಟಿದ್ದ ಒಂದೇ ಕುಟುಂಬ 9 ಜನ ಅಪಘಾತದಲ್ಲಿ ಸಾವು

×

ದೇವರ ದರ್ಶನಕ್ಕೆ ಹೊರಟಿದ್ದ ಒಂದೇ ಕುಟುಂಬ 9 ಜನ ಅಪಘಾತದಲ್ಲಿ ಸಾವು

ರಾಜಸ್ಥಾನದ ಕೋಟಾ-ಉದಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ, ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಯೊಂದಕ್ಕೆ (ಟ್ರಕ್) ಪ್ರಯಾಣಿಕರ ವಾಹನವೊಂದು ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ 9 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ ಮತ್ತು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಒಂದೇ ಕುಟುಂಬದ ಸದಸ್ಯರು ಪ್ರಯಾಣಿಸುತ್ತಿದ್ದ ವಾಹನವು ಕೋಟಾ-ಉದಯಪುರ ಹೆದ್ದಾರಿಯಲ್ಲಿ ಸಾಗುತ್ತಿದ್ದಾಗ, ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯಲ್ಲಿ ನಿಲ್ಲಿಸಲಾಗಿದ್ದ ಭಾರೀ ಗಾತ್ರದ ಟ್ರಕ್‌ಗೆ ಹಿಂಬದಿಯಿಂದ ಬಲವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ವಾಹನದ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರು ವಾಹನದೊಳಗೆ ಸಿಲುಕಿಕೊಂಡಿದ್ದರು.

Sushma Chakre