ಶಿವಮೊಗ್ಗ-ತೀರ್ಥಹಳ್ಳಿ ರಸ್ತೆಯ ಮುಡುಬ ಬಳಿ ರಸ್ತೆ ಮಧ್ಯದಲ್ಲಿ ಕಾಡಾನೆ ಮರಿಯೊಂದರ ಚಿನ್ನಾಟದ ವಿಡಿಯೋ ವೈರಲ್ ಆಗಿದೆ. ರಸ್ತೆ ಮಧ್ಯೆ ರಾತ್ರಿ ಕಾಣಿಸಿಕೊಂಡ ಆನೆಮರಿ, ಎಲ್ಲೆಂದರಲ್ಲಿ ಓಡಾಡಿದೆ. ಈ ದೃಶ್ಯ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದ್ದು, ನಿವೃತ್ತ ಪ್ರಾಂಶುಪಾಲ ಡಾ.ರಾಜಶೇಖರ ಎಂಬವರು ಈ ವಿಡಿಯೋವನ್ನು ಸೆರೆ ಹಿಡಿದಿದ್ದಾರೆ.