ಆಂಧ್ರ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಹೊಸ 'ಜನಸಂಖ್ಯಾ ನಿರ್ವಹಣಾ ನೀತಿ' ಘೋಷಿಸಿದ್ದಾರೆ. ಇದರಲ್ಲಿ ಪ್ರಮುಖವಾಗಿ ರಾಜ್ಯದಲ್ಲಿ ಜನನ ದರ ಕುಸಿಯುತ್ತಿರುವುದನ್ನು ತಡೆಯಲು, ಎರಡನೇ ಮಗು ಅಥವಾ ಅದಕ್ಕಿಂತ ಹೆಚ್ಚಿನ ಮಕ್ಕಳನ್ನು ಹೊಂದುವ ಪೋಷಕರಿಗೆ ಹೆರಿಗೆಯ ಸಮಯದಲ್ಲಿ 25,000 ರೂ. ಪ್ರೋತ್ಸಾಹಧನ ನೀಡಲು ಸರ್ಕಾರ ನಿರ್ಧರಿಸಿದೆ.