ಆನೇಕಲ್ನ ಚಿನ್ನಯ್ಯನಪಾಳ್ಯದ ನಿವಾಸಿಯಾದ ಸೋಮಶೇಖರ್ ಎಂಬ ಯವಕ ಪ್ರೀತಿಸಿದ ಹುಡುಗಿ ಕೈಕೊಟ್ಟಳು ಎಂಬ ಕಾರಣಕ್ಕೆ ಹೈಟೆನ್ಷನ್ ವಿದ್ಯುತ್ ಕಂಬ ಏರಿ ಹೈಡ್ರಾಮಾ ಮಾಡಿದ್ದಾನೆ. ಕೊನೆಗೆ ಪೊಲೀಸರು ಹಾಗೂ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಆತನ ರಕ್ಷಣೆ ಮಾಡಿದ್ದಾರೆ. ಸದ್ಯ, ಆತ ಹೈಟೆನ್ಷನ್ ವಿದ್ಯುತ್ ಕಂಬದಲ್ಲಿ ಕುಳಿತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ.