ಮನೆ ಬಳಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವಿಜಯ್ ಕುಮಾರ್ ಎಂಬ ವ್ಯಕ್ತಿಗೆ ಕ್ಯಾಂಟರ್ ಲಾರಿಯೊಂದು ರಭಸದಿಂದ ಬಂದು ಗುದ್ದಿದ ಘಟನೆ ಬೆಂಗಳೂರು ಹೊರವಲಯದ ಆನೇಕಲ್ನ ಮಾಯಸಂದ್ರ ಬಳಿ ಇತ್ತೀಚೆಗೆ ನಡೆದಿದೆ. ಗಂಭೀರ ಗಾಯಗೊಂಡಿರುವ ವಿಜಯ್ ಕುಮಾರ್ ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಘಟನೆಯ ಭೀಕರ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.