ಏಪ್ರಿಲ್ 9ರಂದು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆ ಚುನಾವಣಾ ಅಧಿಕಾರಿಗಳು ಅಕ್ರಮಗಳ ಮೇಲೆ ಕಟ್ಟುನಿಟ್ಟಿನ ನಿಗಾ ಇರಿಸಿದ್ದಾರೆ. ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 12.37 ಲಕ್ಷ ರೂ. ಹಣ ವಶಕ್ಕೆ ಪಡೆಯಲಾಗಿದೆ. ಧನ್ನೂರು ಚೆಕ್ಪೋಸ್ನಲ್ಲಿ 2 ಪ್ರತ್ಯೇಕ ಪ್ರಕರಣಗಳಲ್ಲಿ ಹಣ ಜಪ್ತಿ ಮಾಡಲಾಗಿದೆ.