ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಪಟ್ಟದಕಲ್ಲು ಚಾಲುಕ್ಯ ಉತ್ಸವವು ಈ ಬಾರಿ ವಿಶೇಷವಾಗಿ ಗಮನ ಸೆಳೆದಿದೆ. ಸಂಗೀತ ನಿರ್ದೇಶಕ ಅರ್ಜುನ್ ಜನ್ಯರವರ ಇಂಪಾದ ಹಾಡಿಗೆ ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಹಾಗೂ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ವೇದಿಕೆಯ ಮೇಲೆ ಹುರುಪಿನಿಂದ ಹೆಜ್ಜೆ ಹಾಕಿದರು. ಈ ಘಟನೆ ಉತ್ಸವಕ್ಕೆ ಮತ್ತಷ್ಟು ಮೆರುಗು ನೀಡಿದ್ದು, ಸಾರ್ವಜನಿಕರಲ್ಲಿ ಹರ್ಷ ಮೂಡಿಸಿದೆ. ಸ್ಥಳೀಯ ಶಾಸಕರ ಈ ನೃತ್ಯ ಪ್ರದರ್ಶನ ಕಾರ್ಯಕ್ರಮದ ಕೇಂದ್ರಬಿಂದುವಾಗಿತ್ತು.