ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನಕ್ಕೂ ಮುನ್ನ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಚರ್ಚೆ ಮತ್ತೆ ಮುನ್ನಲೆಗೆ ಬಂದಿದೆ. ನಿರೀಕ್ಷೆಯಷ್ಟು ಅಭಿವೃದ್ಧಿ ಆಗದಿರುವುದೇ ಇದಕ್ಕೆ ಕಾರಣ ಎಂದು ಬಾಲಚಂದ್ರ ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ. ಪ್ರತ್ಯೇಕ ರಾಜ್ಯವಾದರೆ ಬೆಳಗಾವಿ ರಾಜಧಾನಿಯಾಗಿ ಉತ್ತರ ಕರ್ನಾಟಕ ಅಭಿವೃದ್ಧಿ ಆಗುತ್ತದೆ ಎಂಬ ಉಮೇಶ್ ಕತ್ತಿ ಅವರ ಮಾತನ್ನು ಜಾರಕಿಹೊಳಿ ಸ್ಮರಿಸಿದ್ದಾರೆ.