ಬಳ್ಳಾರಿ ಜಿಲ್ಲೆಯ ಕುರುಗೋಡು ಹೊರವಲಯದ ಆಂಜನೇಯ ದೇಗುಲ ಬಳಿ ಮಿನಿ ಬಸ್, ಟ್ರ್ಯಾಕ್ಟರ್ ನಡುವೆ ಡಿಕ್ಕಿಯಾಗಿ ರತ್ನಮ್ಮ(32) ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಗಾಯಗೊಂಡವರಿಗೆ ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕುರುಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ವಿಡಿಯೋ ಇಲ್ಲಿದೆ.