ಬೆಂಗಳೂರಿನ ಬಿಟಿಎಂ ಲೇಔಟ್ನಲ್ಲಿ ತಡರಾತ್ರಿ ಯುವತಿಗೆ ಮೂವರು ಪುಂಡರು ಕಿರುಕುಳ ನೀಡಿದ ಘಟನೆ ನಡೆದಿದೆ. ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಸುಮಾರು ಎರಡು ಕಿಲೋಮೀಟರ್ ದೂರ ಹಿಂಬಾಲಿಸಿಕೊಂಡು ಹೋಗಿ ಯುವತಿಗೆ ತೊಂದರೆ ನೀಡಿದ್ದಾರೆ. ಈ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಬೆಂಗಳೂರು ನಗರದಲ್ಲಿ ಮಹಿಳೆಯರ ಸುರಕ್ಷತೆ ಕುರಿತು ತೀವ್ರ ಕಳವಳ ಮೂಡಿಸಿದೆ.