ರೀಲ್ಸ್ ಮಾಡುವ ಹುಚ್ಚಾಟಕ್ಕೆ ಬೈಕ್ನಲ್ಲಿ ಅಪಾಯಕಾರಿ ವೀಲ್ಹಿಂಗ್ ಮಾಡುತ್ತಿದ್ದ ಪುಂಡರನ್ನು ಬನ್ನೇರುಘಟ್ಟ ಪೊಲೀಸರು ಬಂಧಿಸಿದ್ದಾರೆ. ಜಿಗಣಿ-ಬನ್ನೇರುಘಟ್ಟ ಮುಖ್ಯರಸ್ತೆಯಲ್ಲಿ ಈ ಘಟನೆ ನಡೆದಿದ್ದು, ವಾಹನ ಸವಾರರಿಗೆ ತೀವ್ರ ಕಿರಿಕಿರಿ ಉಂಟಾಗಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ವೀಡಿಯೊ ಆಧರಿಸಿ, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಸಾರ್ವಜನಿಕರ ಸುರಕ್ಷತೆಗೆ ಧಕ್ಕೆ ತರುತ್ತಿದ್ದ ಇವರ ವರ್ತನೆಗೆ ಕಡಿವಾಣ ಹಾಕಲಾಗಿದೆ.